Friday, July 24, 2026
Join WhatsApp Group
HomeLocal Newsಎಲ್‌ಪಿಜಿ ಪೂರೈಕೆಯಲ್ಲಿ ಸಮಸ್ಯೆಯಾದರೆ ಕರೆ ಮಾಡಿ

ಎಲ್‌ಪಿಜಿ ಪೂರೈಕೆಯಲ್ಲಿ ಸಮಸ್ಯೆಯಾದರೆ ಕರೆ ಮಾಡಿ

ಕಾರವಾರ: ಜಿಲ್ಲಾಡಳಿತವು ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ (IOC BPC HPC) ಸಭೆ ನಡೆಸಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿ ಅಧಿಕಾರಿಗಳಿಂದ ಖಾತ್ರಿಪಡಿಸಿಕೊಂಡಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ದೇಶೀಯ ಎಲ್‌ಪಿಜಿ ದಾಸ್ತಾನು ಗೃಹಬಳಕೆ ಗ್ರಾಹಕರಿಗೆ ಅಗತ್ಯವಿರುವ ಬಗ್ಗೆ ತೈಲ ಕಂಪನಿಗಳು ಮಾಹಿತಿ ನೀಡಿದ್ದು, ಜಿಲ್ಲೆಯ ಎಲ್ಲಾ ಗ್ರಾಹಕರು ಎಲ್‌ಜಿ ಸರಬರಾಜಿನ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ.

ಗ್ರಾಹಕರು ಆತಂಕದಲ್ಲಿ ತುರ್ತು ಮತ್ತು ಅನಗತ್ಯ ಬುಕಿಂಗ್ ಮಾಡದೆ, ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಸೃಷ್ಟಿಯಾಗದಂತೆ ಸಮರ್ಪಕವಾಗಿ ಬಳಕೆ ಮಾಡಲು ಸಮತೋಲನ ಕಾಪಾಡಲು ತಿಳಿಸಿದೆ. ಅಗತ್ಯ ಸೇವೆಗಳನ್ನು ಒದಗಿಸುವ ಸಾರ್ವಜನಿಕ ಸಂಸ್ಥೆಗಳಾದ ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿ, ಶಾಲೆ, ಕಾಲೇಜು, ಕಾರಾಗೃಹ ಇತ್ಯಾದಿ ಸಂಸ್ಥೆಗಳಿಗೆ ಯಾವುದೇ ಅಡಚಣೆಯಾಗದಂತೆ ಎಲ್‌ಪಿಜಿ ಸೌಲಭ್ಯವನ್ನು ಒದಗಿಸುವಂತೆ ತೈಲಕಂಪನಿಗಳಿಗೆ ಸೂಚನೆಯನ್ನು ನೀಡಲಾಗಿದೆ.

ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ದಾಸ್ತಾನು/ಸಾಗಾಣಿಕೆ/ರಿಫಿಲಿಂಗ್ ಪ್ರಕರಣಗಳು ಕಂಡುಬoದಲ್ಲಿ Essential Commodities Act 1955 and Petroleum Products (Maintenance of Production Storage and Supply) Order 1999 and LPG Control Order 2000ರಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಈ ಸಂಬಂಧ ಆಯಾ ತಾಲೂಕಿನ ತಹಸೀಲ್ದಾರರಿಗೆ ಈ ಬಗ್ಗೆ ಕ್ರಮವಹಿಸಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಕಾಳಸಂತೆಕೋರರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲು ಸಹ ನಿರ್ದೇಶನ ನೀಡಲಾಗಿದೆ. ಎಲ್‌ಪಿಜಿ ಕುರಿತು ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಕಂಟ್ರೋಲ್ ರೂಮ್ ಸಂಖ್ಯೆ-08382 229857 ಅಥವಾ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆ-9480805200 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share