ಕಾರವಾರ: ಮಹಾಲಯ ಅಮಾವಾಸ್ಯೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿ ಸುಮಾರು 50 ಹೆಚ್ಚುವರಿ ವಿಶೇಷ ಬಸ್ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅ.9 ಶುಕ್ರವಾರ, ಅ.10 ಎರಡನೇ ಶನಿವಾರ, ಮಹಾಲಯ ಅಮಾವಾಸ್ಯೆ ಹಾಗೂ ಅ.11 ಭಾನುವಾರ ಇರುವುದರಿಂದ ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸಂಸ್ಥೆಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಅ.9ರಂದು ಹೆಚ್ಚುವರಿ ವಿಶೇಷ ಬಸ್ಗಳ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಪ್ರಯಾಣಿಕರು ಹೆಚ್ಚುವರಿ ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಂಡು ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಗಳಲ್ಲೇ ಸಂಚರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.


