Thursday, July 23, 2026
Join WhatsApp Group
HomeAgricultureಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ; ತೊಂದರೆ ಆಗದಂತೆ ಕ್ರಮಕ್ಕೆ ಫಡ್ನವೀಸ್ ಭರವಸೆ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ; ತೊಂದರೆ ಆಗದಂತೆ ಕ್ರಮಕ್ಕೆ ಫಡ್ನವೀಸ್ ಭರವಸೆ

ಕಾರವಾರ/ನವದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಅಡಿಕೆ ಸಾಗಣೆ ಲಾರಿಗಳನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಸೂಕ್ತ ದಾಖಲೆಗಳಿರುವ ಅಡಿಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಭೆಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಡಿಕೆ ಟಾಸ್ಕ್‌ಫೋರ್ಸ್ ಅಧ್ಯಕ್ಷ ಹಾಗೂ ಶಾಸಕ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ.ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ರಾಜ್ಯದ ಪ್ರಮುಖ ಅಡಿಕೆ ಬೆಳೆಗಾರರ ಸಹಕಾರಿ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಣೆ ಲಾರಿಗಳನ್ನು ತಡೆಹಿಡಿದ ಪರಿಣಾಮ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಲಕ್ಷಾಂತರ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಮತ್ತು ವ್ಯಾಪಾರಿಗಳು ಎದುರಿಸುತ್ತಿರುವ ಸಂಕಷ್ಟವನ್ನು ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

ವಿಷಯದ ಗಂಭೀರತೆಯನ್ನು ಮನಗಂಡ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಗತ್ಯ ದಾಖಲೆಗಳನ್ನು ಹೊಂದಿರುವ ಅಡಿಕೆ ಸಾಗಣೆಗೆ ಯಾವುದೇ ಅಡಚಣೆ ಉಂಟಾಗದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ಸಭೆಗೆ ಭರವಸೆ ನೀಡಿದರು.

ಈ ಕುರಿತು ಮಾಹಿತಿ ನೀಡಿರುವ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಅಡಿಕೆ ಬೆಳೆಯು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ಅಡಿಕೆ ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸಲು ತಮ್ಮ ಪ್ರಯತ್ನಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share