Friday, July 24, 2026
Join WhatsApp Group
HomeLocal Newsಜೀವ ತೆಗೆದ ಜಾನುವಾರು

ಜೀವ ತೆಗೆದ ಜಾನುವಾರು

ರಾಷ್ಟ್ರೀಯ ಹೆದ್ದಾರಿಯಲ್ಲಿ ದುರಂತ; ಬೈಕ್ ಹಿಂಬದಿ ಸವಾರ ಬಲಿ

ಕಾರವಾರ: ರಾಷ್ಟ್ರೀಯ ಹೆದ್ದಾರಿ–66ರ ಮಾಜಾಳಿ ಗಾಂವಗೇರಿ ಕ್ರಾಸ್ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿಂಬದಿ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಜುಲೈ 9ರಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬಿಣಗಾ ನಿವಾಸಿ ವಿಜಯ (30) ಅವರು ಬೈಕ್‌ನಲ್ಲಿ ಮಹೇಂದ್ರ ಅವರನ್ನು ಹಿಂಬದಿ ಕೂರಿಸಿಕೊಂಡು ಮಾಜಾಳಿಯಿಂದ ಕಾರವಾರದ ಕಡೆಗೆ ತೆರಳುತ್ತಿದ್ದರು.

ಈ ವೇಳೆ ಗಾಂವಗೇರಿ ಕ್ರಾಸ್ ಸಮೀಪ ರಸ್ತೆಗೆ ದನ ಅಡ್ಡ ಬಂದ ಪರಿಣಾಮ ಬೈಕ್‌ನ ನಿಯಂತ್ರಣ ತಪ್ಪಿ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರ ವಿಜಯ ಅವರ ಕಾಲಿಗೆ ಗಾಯಗಳಾಗಿದ್ದು, ಹಿಂಬದಿ ಸವಾರ ಮಹೇಂದ್ರ ಅವರ ತಲೆಗೆ ಗಂಭೀರ ಗಾಯಗಳಾಗಿತ್ತು.

ಗಾಯಾಳುಗಳನ್ನು ತಕ್ಷಣ ಕಾರವಾರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹೇಂದ್ರ ಮೃತಪಟ್ಟಿದ್ದಾರೆ.

ಈ ಸಂಬಂಧ ತೋಡೂರು ನಿವಾಸಿ ಶ್ಯಾಮು (43) ಅವರು ನೀಡಿದ ದೂರಿನ ಮೇರೆಗೆ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

majali-bike-accident-pillion-rider-dies-after-cow-crosses-nh66

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share