Friday, July 24, 2026
Join WhatsApp Group
HomeCrimeಬೈಲೂರು ಕಲ್ಲು ತೂರಾಟ ಪ್ರಕರಣ: ಅಪ್ರಾಪ್ತರಿಗೆ ಅಮಲೇರಿಸಿದವ ಅರೆಸ್ಟ್?!

ಬೈಲೂರು ಕಲ್ಲು ತೂರಾಟ ಪ್ರಕರಣ: ಅಪ್ರಾಪ್ತರಿಗೆ ಅಮಲೇರಿಸಿದವ ಅರೆಸ್ಟ್?!

ಭಟ್ಕಳ: ಬೈಲೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕರಿಂದ ನಡೆದ ಕಲ್ಲೆಸೆತ ಘಟನೆಗೆ ಸಂಬಂಧಿಸಿದಂತೆ ಮುರ್ಡೇಶ್ವರ ಪೊಲೀಸರು ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದ್ದು, ಅಪ್ರಾಪ್ತರಿಗೆ ಮತ್ತಿನ ಪದಾರ್ಥಗಳನ್ನು ಪೂರೈಸಿದ ಆರೋಪದಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಂಧಿತ ವ್ಯಕ್ತಿ ಭಟ್ಕಳದ ಕರಗದ್ದೆ 2ನೇ ಕ್ರಾಸ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಬೈಲೂರಿನಲ್ಲಿ ಅಪ್ರಾಪ್ತ ಬಾಲಕರ ಗುಂಪೊಂದು ಹಿಂದೂ ಮನೆಗಳ ಮೇಲೆ ಕಲ್ಲೆಸೆದ ಘಟನೆ ನಡೆದಿದ್ದು, ಅದರ ತನಿಖೆ ವೇಳೆ ಈ ಆರೋಪ ಬೆಳಕಿಗೆ ಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಅಪ್ರಾಪ್ತರಿಗೆ ಮ*ತ್ತಿನ ಪದಾರ್ಥಗಳನ್ನು ನೀಡಿದ್ದು, ಅದರಿಂದ ಅವರು ಘಟನೆಯಲ್ಲಿ ಭಾಗಿಯಾಗಲು ಪ್ರೇರಿತರಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ವಿಶ್ವಾಸಾರ್ಹ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾರ್ಯಾಚರಣೆಯ ವೇಳೆ ಆರೋಪಿತನಿಂದ ಒಂದು ಇ-ಸಿಗರೇಟ್ ಪ್ಯಾಕೆಟ್ ಹಾಗೂ ಒಂಬತ್ತು ರಿಫಿಲ್ ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share