Friday, July 24, 2026
Join WhatsApp Group
HomeLocal Newsಭೈರುಂಬೆಯಲ್ಲಿ ಮದ್ಯದ ಅಡ್ಡೆ ಮೇಲೆ ದಾಳಿ

ಭೈರುಂಬೆಯಲ್ಲಿ ಮದ್ಯದ ಅಡ್ಡೆ ಮೇಲೆ ದಾಳಿ

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನಕ್ಕೆ ಅವಕಾಶ ಕಲ್ಪಿಸುತ್ತಿದ್ದ ಆರೋಪದ ಮೇಲೆ ಶಿರಸಿ ತಾಲೂಕಿನ ನೆಗ್ಗು ಗ್ರಾಮದ ವ್ಯಕ್ತಿಯೊಬ್ಬರ ವಿರುದ್ಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜುಲೈ 8ರಂದು ಸಂಜೆ ಸುಮಾರು 7.30ರ ವೇಳೆಗೆ ಶಿರಸಿ ತಾಲೂಕಿನ ಭೈರುಂಬೆ ಗ್ರಾಮದ ಮಂಡಳ ಪಂಚಾಯತ್ ವ್ಯಾಪಾರ ಮಳಿಗೆ ಎದುರಿನ ಸಾರ್ವಜನಿಕ ಸ್ಥಳದಲ್ಲಿ ವಿನಾಯಕ (30) ನೆಗ್ಗು ಎಂಬಾತ ಸಾರ್ವಜನಿಕರಿಗೆ ಮದ್ಯಪಾನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಪಿಎಸ್‌ಐ (ತನಿಖೆ) ಅಶೋಕ ಆರ್. ರಾಠೋಡ ಅವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸ್ಥಳದಲ್ಲಿ ವಿವಿಧ ಕಂಪನಿಗಳ, ವಿವಿಧ ಅಳತೆಯ ಮದ್ಯದ ಟೆಟ್ರಾ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share