Monday, October 26, 2026
HomeLocal Newsಯಲ್ಲಾಪುರ | ಮಾವಿನಕಟ್ಟಾದಲ್ಲಿ ಕೆನರಾ ಬ್ಯಾಂಕ್ ಶಾಖೆ ಸ್ಥಾಪನೆಗೆ ಚರ್ಚೆ

ಯಲ್ಲಾಪುರ | ಮಾವಿನಕಟ್ಟಾದಲ್ಲಿ ಕೆನರಾ ಬ್ಯಾಂಕ್ ಶಾಖೆ ಸ್ಥಾಪನೆಗೆ ಚರ್ಚೆ

ಯಲ್ಲಾಪುರ: ಗ್ರಾಮದಲ್ಲೇ ಬ್ಯಾಂಕಿಂಗ್ ಸೇವೆಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಮಾವಿನಕಟ್ಟಾದಲ್ಲಿ ಕೆನರಾ ಬ್ಯಾಂಕ್ ಶಾಖೆ ಆರಂಭಿಸುವ ಕುರಿತು ಗ್ರಾಮಸ್ಥರು ಸಭೆ ನಡೆಸಿ ಚರ್ಚಿಸಿದರು.

ಗ್ರಾಮದ ಮುಖಂಡರು, ಯುವಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಪಾಲ್ಗೊಂಡು ಹೊಸ ಶಾಖೆಯ ಅಗತ್ಯತೆ ಮತ್ತು ಅದರಿಂದ ಗ್ರಾಮಕ್ಕೆ ಆಗಬಹುದಾದ ಪ್ರಯೋಜನಗಳ ಕುರಿತು ಅಭಿಪ್ರಾಯ ಹಂಚಿಕೊಂಡರು.

ಮಾವಿನಕಟ್ಟಾದಲ್ಲಿ ಬ್ಯಾಂಕ್ ಶಾಖೆ ಆರಂಭವಾದರೆ ರೈತರು, ಮಹಿಳಾ ಸ್ವಸಹಾಯ ಸಂಘಗಳು, ಸಣ್ಣ ವ್ಯಾಪಾರಿಗಳು ಹಾಗೂ ಯುವಕರಿಗೆ ಅನುಕೂಲವಾಗಲಿದೆ. ಉಳಿತಾಯ ಖಾತೆ, ಸಾಲ ಸೌಲಭ್ಯ ಮತ್ತು ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ದೂರದ ಊರುಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

ಗ್ರಾಮದ ಬಹುಕಾಲದ ಬೇಡಿಕೆಯಾಗಿರುವ ಕೆನರಾ ಬ್ಯಾಂಕ್ ಶಾಖೆ ಸ್ಥಾಪನೆಗಾಗಿ ಮುಂದಿನ ಹಂತಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.

ಸಭೆಯಲ್ಲಿ ನಟರಾಜ್ ಗೌಡರ್, ಪ್ರಕಾಶ್ ನಾಯ್ಕ್, ವಾಸುದೇವ ಶೆಟ್ಟಿ, ಯುವರಾಜ್ ನಾಯ್ಕ್, ದತ್ತಾತ್ರೇಯ ನಾಯ್ಕ್, ರಾಮಕೃಷ್ಣ ಹೆಗಡೆ ಸೇರಿದಂತೆ ಗ್ರಾಮದ ಯುವಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share