Monday, September 7, 2026
Join WhatsApp Group
HomeCrimeಮೀಟರ್ ಬಡ್ಡಿ ಕುಳದ ಮೇಲೆ ದಾಳಿ; ಖಾಲಿ ಚೆಕ್‌, ದಾಖಲೆ ವಶಕ್ಕೆ

ಮೀಟರ್ ಬಡ್ಡಿ ಕುಳದ ಮೇಲೆ ದಾಳಿ; ಖಾಲಿ ಚೆಕ್‌, ದಾಖಲೆ ವಶಕ್ಕೆ

ದಾಂಡೇಲಿ: ನಗರದಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ಹಾವಳಿಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ವ್ಯಕ್ತಿಯೊಬ್ಬನ ಮನೆಯಲ್ಲಿ ಅಕ್ರಮ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀದೇವಿ ಡಿ. ಕಟ್ಟಿಮನಿ ಅವರು ನೀಡಿದ ದೂರಿನ ಮೇರೆಗೆ ಗಾಂಧಿನಗರ ಆಶ್ರಯ ಕಾಲೋನಿಯ ನಿವಾಸಿ ರಿಯಾಜ್ @ ಶೇರಖಾನ್ ತಂದೆ ಇಬ್ರಾಹಿಂ ಲಿಂಬೂವಾಲೆ (32) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದಾಂಡೇಲಿ ನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರ ಹೆಚ್ಚುತ್ತಿರುವ ಕುರಿತು ಮೇಲಾಧಿಕಾರಿಗಳ ಸೂಚನೆಯಂತೆ ಮೇ 12ರಂದು ಬೆಳಿಗ್ಗೆ ಅಧಿಕಾರಿಗಳು ಪಂಚರು ಹಾಗೂ ಪೊಲೀಸ್ ಸಿಬ್ಬಂದಿಯೊಂದಿಗೆ ಆರೋಪಿತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದರು.

ಈ ವೇಳೆ ಅಕ್ರಮ ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದೆ ಎನ್ನಲಾದ ವಿವಿಧ ಬ್ಯಾಂಕ್ ಖಾತೆಗಳ ಸಹಿಯುಳ್ಳ 14 ಖಾಲಿ ಚೆಕ್‌ಗಳು, ಪ್ರಶ್ನಾತೀತ ದಾಖಲೆಗಳು ಹಾಗೂ ಬಡ್ಡಿ ವ್ಯವಹಾರದ ನೋಟ್ ಪುಸ್ತಕ ಪತ್ತೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿತನು ಯಾವುದೇ ಪರವಾನಗಿ ಪಡೆಯದೇ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದು, ಮಿತಿಗಿಂತ ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share