Saturday, September 19, 2026
Join WhatsApp Group
HomeLocal Newsಮೋದಿ ಜನ್ಮದಿನ: ಸದಾಶಿವಗಡ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೋದಿ ಜನ್ಮದಿನ: ಸದಾಶಿವಗಡ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಿಜೆಪಿ ಪ್ರಮುಖರು, ಕಾರ್ಯಕರ್ತರೊಂದಿಗೆ ಪೂಜೆಯಲ್ಲಿ ಪಾಲ್ಗೊಂಡ ರೂಪಾಲಿ ನಾಯ್ಕ

ಕಾರವಾರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಗ್ರಾಮೀಣ ಮಂಡಲ ವತಿಯಿಂದ ಸದಾಶಿವಗಡದ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ಎಸ್. ನಾಯ್ಕ ಅವರು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರೊಂದಿಗೆ ದೇವಸ್ಥಾನಕ್ಕೆ ತೆರಳಿ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ನರೇಂದ್ರ ಮೋದಿ ಅವರ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ಭವಿಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಅಭಿವೃದ್ಧಿ ಕಾರ್ಯಗಳು ಮುಂದುವರಿಯುತ್ತಿದ್ದು, ಅವರ ಸೇವೆ ದೇಶಕ್ಕೆ ಇನ್ನಷ್ಟು ಕಾಲ ಲಭಿಸುವಂತಾಗಲಿ ಹಾಗೂ ಅವರು ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯದಿಂದ ದೇಶ ಸೇವೆ ಮುಂದುವರಿಸಲಿ ಎಂದು ರೂಪಾಲಿ ನಾಯ್ಕ ದುರ್ಗಾದೇವಿಯಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಸೂರಜ್ ದೇಸಾಯಿ, ಸುಜಾತಾ ಬಾಂದೇಕರ್, ಸ್ವಾತಿ ದೇಸಾಯಿ, ರಾಕೇಶ್ ಆಚಾರಿ, ಮಾರುತಿ ದುಧಾಳ್ಕರ್, ಪುನೀತ್ ಕಲ್ಗುಟ್ಕರ್, ದಿಲೀಪ್ ಗಜೀನಕರ್, ಉದಯ ಕಲ್ಗುಟ್ಕರ್, ಸಂತೋಷ್ ಪವಾರ್ ಸೇರಿದಂತೆ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share