Monday, September 7, 2026
Join WhatsApp Group
HomeCrimeಕಾಡಲ್ಲಿ ಅಂದರ್-ಬಾಹರ್; ನಾಲ್ವರ ಬಂಧನ, ಇಬ್ಬರು ಪರಾರಿ

ಕಾಡಲ್ಲಿ ಅಂದರ್-ಬಾಹರ್; ನಾಲ್ವರ ಬಂಧನ, ಇಬ್ಬರು ಪರಾರಿ

ಮುಂಡಗೋಡ: ತಾಲೂಕಿನ ಲಕ್ಕೊಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ನಡೆಸುತ್ತಿದ್ದವರ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಮುಂಡಗೋಡ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಂಜುನಾಥ ಗೌಡ ನೇತೃತ್ವದಲ್ಲಿ ಜೂನ್ 3ರಂದು ಸಂಜೆ 7.20ರ ಸುಮಾರಿಗೆ ದಾಳಿ ನಡೆಸಲಾಯಿತು.

ಬಂಧಿತ ಆರೋಪಿಗಳನ್ನು ಮುಂಡಗೋಡ ಪಟ್ಟಣ ನಿವಾಸಿಗಳಾದ ಪೈರೂಜ್‌ಖಾನ್ ಅಮಜದ್‌ಖಾನ್ ಖಾನಜಾದೆ (22), ಸೂರಜ್ ಈರಪ್ಪ ಕೊರವರ (29), ಶಹಬಾಜ್ ಅಹ್ಮದ್ ಮಹಮ್ಮದ್ ಹನೀಫ್ ಕಲೆಗಾರ (28) ಹಾಗೂ ಅನಿಲ್ ನಾಗಪ್ಪ ಕೊರವರ (28) ಎಂದು ಗುರುತಿಸಲಾಗಿದೆ. ದಾಳಿ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ ₹9,310 ನಗದು, 52 ಇಸ್ಪೀಟ್ ಎಲೆಗಳು ಹಾಗೂ ಒಂದು ಪ್ಲಾಸ್ಟಿಕ್ ಚೀಲವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರ ದಾಳಿ ವೇಳೆ ಮೇಹಬೂಬ್‌ಸಾಬ್ ಬೆಂಡಿಗೇರಿ ಹಾಗೂ ಅಬ್ದುಲ್ ಬಾಕರ್ ಕಲೆಗಾರ ಎಂಬ ಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share