Sunday, June 14, 2026
HomeCrimeಗಾಂಜಾ ಮಾರುತ್ತಿದ್ದ ಇಸ್ಮಾಯಿಲ್‌ ಅಂದರ್

ಗಾಂಜಾ ಮಾರುತ್ತಿದ್ದ ಇಸ್ಮಾಯಿಲ್‌ ಅಂದರ್

ಮುಂಡಗೋಡ: ಪಟ್ಟಣದ ಬ್ಲೂ ಹಿಲ್ ಹೋಟೆಲ್ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮುಂಡಗೋಡ ಪೊಲೀಸರು ಓರ್ವನನ್ನು ಬಂಧಿಸಿ, 436 ಗ್ರಾಂ ಗಾಂಜಾ ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ಮುಂಡಗೋಡದ ಹಳ್ಳೂರ ಓಣಿಯ ನಿವಾಸಿ ಇಸ್ಮಾಯಿಲ್ ಜಮಖಂಡಿ (40) ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಯಲ್ಲಾಪುರ–ಮುಂಡಗೋಡ ರಾಜ್ಯ ಹೆದ್ದಾರಿ-6ರ ಬ್ಲೂ ಹಿಲ್ ಹೋಟೆಲ್ ಬಳಿ ಇಸ್ಮಾಯಿಲ್ ಯಾವುದೇ ಪರವಾನಗಿ ಇಲ್ಲದೆ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸ್ ನಿರೀಕ್ಷಕ ರಮೇಶ್ ಹಾನಾಪುರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 436 ಗ್ರಾಂ ತೂಕದ ಗಾಂಜಾ ಹಾಗೂ 600 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಗಾಂಜಾ ಸಾಗಾಟಕ್ಕೆ ಬಳಸಲಾಗುತ್ತಿದ್ದ ಕೆಎ-31/ಎಕ್ಸ್-3972 ಸಂಖ್ಯೆಯ ಮೋಟಾರ್‌ಸೈಕಲ್‌ನನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share