ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ದುಡುಕಿನಿಂದ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಆರೋಪದಡಿ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆ.25ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಟ್ಕಳದಿಂದ ಮುರ್ಡೇಶ್ವರ ಕಡೆಗೆ ತೆರಳುತ್ತಿದ್ದ ಕೆಎ-47-ಇಎ-8449 ನೋಂದಣಿ ಸಂಖ್ಯೆಯ ಮೋಟಾರ್ ಸೈಕಲ್, ಬೇಂಗ್ರೆ ಗ್ರಾಮದ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ ಕ್ರಾಸ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದೇವಿ ಮಾಸ್ತಿ ಗೊಂಡ (46) ಅವರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ದೇವಿ ಅವರ ಎಡಗಾಲು, ತಲೆ ಹಾಗೂ ಎದೆ ಭಾಗಕ್ಕೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಾಳು ಮಹಿಳೆಯ ಪುತ್ರ ನಾಗರಾಜ ಮಾಸ್ತಿ ಗೊಂಡ (21) ಅವರು ಮುರ್ಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೈಕ್ ಸವಾರ, ಬೇಂಗ್ರೆಯ ಉಳ್ಮಣದ ರಾಘವೇಂದ್ರ ಗಣಪತಿ ದೇವಾಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.