Monday, September 7, 2026
Join WhatsApp Group
HomeLocal Newsನೇಪಾಳ-ಟಿಬೆಟ್ ಗಡಿಗೆ ತೆರಳಿದ ಜಿಲ್ಲೆಯ ಸಾರ್ವಜನಿಕರ ಮಾಹಿತಿ ನೀಡಿ

ನೇಪಾಳ-ಟಿಬೆಟ್ ಗಡಿಗೆ ತೆರಳಿದ ಜಿಲ್ಲೆಯ ಸಾರ್ವಜನಿಕರ ಮಾಹಿತಿ ನೀಡಿ

ಕಾರವಾರ: ನೇಪಾಳ-ಟಿಬೆಟ್ ಗಡಿಭಾಗದಲ್ಲಿ ಆ.26ರಂದು ದಿಢೀರ್ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯಿಂದ ನೇಪಾಳಕ್ಕೆ ಪ್ರವಾಸ ಅಥವಾ ಇತರೆ ಕಾರಣಗಳಿಗಾಗಿ ತೆರಳಿರುವ ಯಾವುದೇ ಪ್ರವಾಸಿಗರು ಅಥವಾ ನಾಗರಿಕರು ನಾಪತ್ತೆಯಾಗಿದ್ದರೆ, ಸಿಲುಕಿಕೊಂಡಿದ್ದರೆ ಅಥವಾ ಪ್ರಸ್ತುತ ಸಂಪರ್ಕಕ್ಕೆ ಸಿಗದಿದ್ದರೆ ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಸಂಬಂಧಪಟ್ಟ ವ್ಯಕ್ತಿಯ ಹೆಸರು, ವಯಸ್ಸು, ವಿಳಾಸ, ಮೊಬೈಲ್ ಸಂಖ್ಯೆ, ಪ್ರಯಾಣದ ವಿವರಗಳು, ಕೊನೆಯದಾಗಿ ಸಂಪರ್ಕವಾದ ದಿನಾಂಕ ಹಾಗೂ ಸ್ಥಳ ಸೇರಿದಂತೆ ಲಭ್ಯವಿರುವ ಮಾಹಿತಿಯನ್ನು ತಡಮಾಡದೇ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಪತ್ತೆಯಾಗಿರುವವರು ಅಥವಾ ಸಂಕಷ್ಟಕ್ಕೆ ಸಿಲುಕಿರುವವರ ಪತ್ತೆ, ಸುರಕ್ಷತೆ ಹಾಗೂ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳಲು ಈ ಮಾಹಿತಿ ಸಹಕಾರಿಯಾಗಲಿದೆ. ಹೀಗಾಗಿ ಜಿಲ್ಲೆಯ ಸಾರ್ವಜನಿಕರು ಲಭ್ಯವಿರುವ ಮಾಹಿತಿಯನ್ನು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಸಹಾಯವಾಣಿ ಸಂಪರ್ಕ

ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಕಾರ್ಯಾಚರಣೆ ಕೇಂದ್ರ (DEOC): 08382-229857, ಉಚಿತ ಸಹಾಯವಾಣಿ: 1077, ಮೊಬೈಲ್: 9483511015, ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ: 080-22253707, ಇ-ಮೇಲ್: seockarnataka@gmail.com ಅಥವಾ ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಹಾಯವಾಣಿ: +977 9851316807, +977 9709107500, +977 9810326117 ಸಂಪರ್ಕಿಸಬಹುದಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share