Friday, March 13, 2026
HomeNationalನಿತೀಶ್ ಕುಮಾರ್;‌ ರಾಜ್ಯ ರಾಜಕೀಯಕ್ಕೆ ವಿದಾಯ?!

ನಿತೀಶ್ ಕುಮಾರ್;‌ ರಾಜ್ಯ ರಾಜಕೀಯಕ್ಕೆ ವಿದಾಯ?!

ಬಿಹಾರ: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುವ ಸಾಧ್ಯತೆ ವ್ಯಕ್ತವಾಗಿದೆ. ಸುಮಾರು 10 ಬಾರಿ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡಿರುವ ನಿತೀಶ್ ಕುಮಾರ್ ಅವರು ರಾಜ್ಯ ರಾಜಕೀಯದಿಂದ ಹಿಂದೆ ಸರಿದು ರಾಷ್ಟ್ರ ರಾಜಕಾರಣದತ್ತ ಮುಖ ಮಾಡಲಿದ್ದಾರೆ ಎಂಬ ಚರ್ಚೆ ಇದೀಗ ಮತ್ತಷ್ಟು ಗಟ್ಟಿಯಾಗುತ್ತಿದೆ.

ಇದುವರೆಗೂ ಈ ಸುದ್ದಿ ನಿಜವೋ ಸುಳ್ಳೋ ಎಂಬ ಗೊಂದಲವಿದ್ದರೂ, ಇದೀಗ ಸ್ವತಃ ನಿತೀಶ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ರಾಜಕೀಯ ಬದಲಾವಣೆಯ ಸುಳಿವು ನೀಡಿದ್ದಾರೆ. ಅವರು ಶೀಘ್ರದಲ್ಲೇ ರಾಜ್ಯಸಭೆಗೆ ಹೋಗುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

ಈ ನಿರ್ಧಾರ ಬಿಹಾರ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಅವರು ಇನ್ನೂ ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Nitish Kumar ಅವರು X ಖಾತೆಯಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದು, “ಕಳೆದ ಎರಡು ದಶಕಗಳಿಂದ ನೀವು ನನ್ನ ಮೇಲಿಟ್ಟ ನಂಬಿಕೆ ಮತ್ತು ಬೆಂಬಲದಿಂದಾಗಿ ಬಿಹಾರಕ್ಕೆ ಸಂಪೂರ್ಣ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ನಿಮ್ಮ ಸಹಕಾರದಿಂದ ಬಿಹಾರ ಇಂದು ಅಭಿವೃದ್ಧಿ ಮತ್ತು ಗೌರವದ ಹೊಸ ಹಾದಿ ಕಂಡಿದೆ. ಇದಕ್ಕಾಗಿ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು,” ಎಂದು ಬರೆದಿದ್ದಾರೆ.

ಅಲ್ಲದೆ, “ನಿಮ್ಮೊಂದಿಗಿನ ನನ್ನ ಸಂಬಂಧ ಮುಂದೆಯೂ ಮುಂದುವರಿಯುತ್ತದೆ. ಅಭಿವೃದ್ಧಿ ಹೊಂದಿದ ಬಿಹಾರ ನಿರ್ಮಾಣಕ್ಕೆ ನಿಮ್ಮೊಂದಿಗೆ ನಮ್ಮ ಪ್ರಯತ್ನ ಮುಂದುವರಿಯುತ್ತದೆ. ಹೊಸದಾಗಿ ರೂಪುಗೊಳ್ಳುವ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ,” ಎಂದು ತಿಳಿಸಿದ್ದಾರೆ.

ಈ ಬೆಳವಣಿಗೆ ಬಿಹಾರ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share