Saturday, May 30, 2026
HomeLocal Newsಯುಗಾದಿ ಹಬ್ಬಕ್ಕೆ ವಿಶೇಷ ಬಸ್

ಯುಗಾದಿ ಹಬ್ಬಕ್ಕೆ ವಿಶೇಷ ಬಸ್

ಕಾರವಾರ: ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.‌ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 171 ಹೆಚ್ಚುವರಿ ವಿಶೇಷ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

 ಮಾ.18 ಮತ್ತು ಮಾ.19 ಯುಗಾದಿ, ಮಾ.21 ರಂಜಾನ್ ಹಬ್ಬ, ಮಾ.22 ಭಾನುವಾರವಿರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಮಾ. 18ರಿಂದ ಮಾ. 20ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ.

ಸದರಿ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವುದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share