ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಆಗಸ್ಟ್ 3 (ಸೋಮವಾರ)ರಂದು ರಜೆ ಘೋಷಿಸಲಾಗಿದೆ.
ಆಗಸ್ಟ್ 3ರಂದು ಮಾತ್ರ ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಅನ್ವಯವಾಗಲಿದೆ. ನಂತರ ಈ ರಜೆಯನ್ನು ಸಂಬಂಧಪಟ್ಟ ಇಲಾಖೆಗಳು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಜಿಲ್ಲಾಡಳಿತವು ಸಾರ್ವಜನಿಕರು ಹಾಗೂ ಪೋಷಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದು, ಹವಾಮಾನ ಇಲಾಖೆಯ ಮುಂದಿನ ಸೂಚನೆಗಳನ್ನು ಗಮನಿಸುವಂತೆ ತಿಳಿಸಿದೆ.