Monday, September 7, 2026
Join WhatsApp Group
HomeLocal Newsಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಇಬ್ಬರ ವಿರುದ್ಧ ಪ್ರಕರಣ

ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಇಬ್ಬರ ವಿರುದ್ಧ ಪ್ರಕರಣ

ಸಿದ್ದಾಪುರ: ತಾಲೂಕಿನ ಪ್ರವಾಸಿಗರ ಆಕರ್ಷಣೆಯ ತಾಣವಾಗಿರುವ ನಿಪ್ಲಿ ಫಾಲ್ಸ್‌ನಲ್ಲಿ ವಾಹನ ಪಾರ್ಕಿಂಗ್ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 2ರಂದು ಸಂಜೆ 6.15ರಿಂದ 6.30ರ ನಡುವೆ ಸಿದ್ದಾಪುರ ತಾಲೂಕಿನ ಹುಸೂರು ಗ್ರಾಮದ ನಿಪ್ಲಿ ಫಾಲ್ಸ್‌ಗೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ಪಾರ್ಕಿಂಗ್ ವಿಚಾರವಾಗಿ ನಿಪ್ಲಿ ನಿವಾಸಿ ವಿನಾಯಕ ಶೇಟ್ ಹಾಗೂ ಹಳದಿ ಬಣ್ಣದ ಟಿ-ಶರ್ಟ್ ಧರಿಸಿದ್ದ ಸುಮಾರು 30ರಿಂದ 35 ವರ್ಷದ ಅಪರಿಚಿತ ವ್ಯಕ್ತಿ ನಡುವೆ ವಾಗ್ವಾದ ನಡೆದು, ಬಳಿಕ ಗಲಾಟೆಗೆ ತಿರುಗಿದೆ.

ಈ ಗಲಾಟೆಯಿಂದ ಫಾಲ್ಸ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರಿಗೆ ತೊಂದರೆಯಾಗಿದ್ದು, ಸಾರ್ವಜನಿಕರ ನೆಮ್ಮದಿಗೂ ಭಂಗ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಲಾಟೆಯಲ್ಲಿ ಭಾಗಿಯಾಗಿದ್ದ ಅಪರಿಚಿತ ವ್ಯಕ್ತಿಯ ಹೆಸರು ಹಾಗೂ ವಿಳಾಸ ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸಿದರೂ ಮಾಹಿತಿ ದೊರೆಯದ ಕಾರಣ, ಬಳಿಕ ಸರ್ಕಾರದ ಪರವಾಗಿ ಸಿದ್ದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಗೋಪಾಲ ಶಿವಮೂರ್ತೆಪ್ಪ ಕುರುಬರ ದೂರು ನೀಡಿದ್ದಾರೆ.

ಈ ದೂರಿನ ಆಧಾರದ ಮೇಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share