Monday, September 7, 2026
Join WhatsApp Group
HomeAgricultureಪಿಎಂ ಕಿಸಾನ್‌ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಪಿಎಂ ಕಿಸಾನ್‌ ಹಣ ಪಡೆಯಲು ಇ-ಕೆವೈಸಿ ಕಡ್ಡಾಯ

ಕಾರವಾರ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ದೊರೆಯುವ ವಾರ್ಷಿಕ 6 ಸಾವಿರ ರೂ ಸಹಾಯಧನ ಪಡೆಯಲು ರೈತರು ಪ್ರತಿ ವರ್ಷವೂ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರದಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6 ಸಾವಿರ ರೂ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಆದರೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಯೋಜನೆಯ ಸೌಲಭ್ಯ ಪಡೆಯುವಲ್ಲಿ ತೊಂದರೆಯಾಗುವ ಸಾಧ್ಯತೆಯಿದೆ.

ರೈತರು ಇ-ಕೆವೈಸಿ ಪೂರ್ಣಗೊಳಿಸಲು ಎರಡು ವಿಧಾನಗಳನ್ನು ಬಳಸಬಹುದು. ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿಗಾಗಿ ಸಮೀಪದ ಗ್ರಾಹಕ ಸೇವಾ ಕೇಂದ್ರ (CSC), ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಕ್ಕೆ ತೆರಳಿ ಆಧಾರ್ ಕಾರ್ಡ್ ಅಥವಾ ಆಧಾರ್ ಸಂಖ್ಯೆಯ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಇನ್ನು ಮನೆಯಿಂದಲೇ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಮಾಡಿಕೊಳ್ಳಲು ವಿಎನ್‌ಓ ಆಪ್‌ ಬಳಸಬಹುದಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಪಿಎಂ ಕಿಸಾನ್ ಯೋಜನೆಯ ಹಲವು ಫಲಾನುಭವಿಗಳ ಇ-ಕೆವೈಸಿ ಇನ್ನೂ ಬಾಕಿ ಇರುವ ಹಿನ್ನೆಲೆಯಲ್ಲಿ, ರೈತರು ತಡಮಾಡದೇ ಬಯೋಮೆಟ್ರಿಕ್ ಅಥವಾ ಮೊಬೈಲ್ ಆಪ್ ಮೂಲಕ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share