Monday, July 27, 2026
Join WhatsApp Group
HomeLocal Newsಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ

ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ

ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕೈಗೊಳ್ಳುವ ಟಾಸ್ಕ್ ಫೋರ್ಸ್ ಸೇರಿದಂತೆ ಯಾವುದೇ ಕಾಮಗಾರಿಯಲ್ಲಿ ಗುಣಮಟ್ಟ ಕಳಪೆಯಾಗಿರುವುದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಎಚ್ಚರಿಕೆ ನೀಡಿದರು.

ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಯ ಪ್ರಗತಿಯನ್ನು ದೃಢೀಕರಿಸುವ ಜಿಪಿಎಸ್ ಮಾಹಿತಿಯೊಂದಿಗೆ ಛಾಯಾಚಿತ್ರಗಳನ್ನು ಸಲ್ಲಿಸಿದ ಬಳಿಕವೇ ಸಂಬಂಧಿಸಿದ ಕಾಮಗಾರಿಯ ಬಿಲ್ ಮೊತ್ತವನ್ನು ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೊಳವೆ ಬಾವಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಅವುಗಳಿಗೆ ಸಾಧ್ಯವಾದಷ್ಟು ಬೇಗ ವಿದ್ಯುತ್ ಸಂಪರ್ಕ ಹಾಗೂ ಪಂಪ್‌ಸೆಟ್ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರಿನ ಯೋಜನೆಗಳು ವಿಳಂಬವಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ದುರಸ್ತಿ ಹಾಗೂ ಕಾರ್ಯಕ್ಷಮತೆ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಬಕ್ಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share