Monday, September 7, 2026
Join WhatsApp Group
HomeLocal Newsಸಾಧನೆಯ ದೀಪ ಬೆಳಗಿದ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳು

ಸಾಧನೆಯ ದೀಪ ಬೆಳಗಿದ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳು

SSLCಯಲ್ಲಿ ಸತತ 4ನೇ ಬಾರಿಗೆ 100ಕ್ಕೆ 100 ಫಲಿತಾಂಶ ಸಾಧನೆ

ಯಲ್ಲಾಪುರ: ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಸತತ 4ನೇ ಬಾರಿಗೆ 100ಕ್ಕೆ 100ರಷ್ಟು ಫಲಿತಾಂಶ ಸಾಧಿಸಿದ್ದಾರೆ.

ಕಳೆದ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ನಡೆದ SSLC ವಾರ್ಷಿಕ ಪರೀಕ್ಷೆ -1ರಲ್ಲಿ ಹಾಜರಾದ 39 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟೂ 9 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆ, 28 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿಯೂ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಗುಣಮಟ್ಟದ ಶಿಕ್ಷಣವು ಶೇ. 90.18 ಆಗಿದ್ದು, ಶ್ರೀನಿಧಿ ಹೆಗಡೆ 594 ಅಂಕ (95.0)ಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದರೆ, ಮೂರ್ತಿ ಗೌಡ ಹಾಗೂ ಎಂ. ಅನನ್ಯ 593 ಅಂಕ (94.9)ಗಳೊಂದಿಗೆ ದ್ವಿತೀಯ ಸ್ಥಾನ, ಧನ್ಯಾ ಹೆಗಡೆ 593 ಅಂಕ (94.4)ಗಳೊಂದಿಗೆ ತೃತೀಯ ಸ್ಥಾನ ಗಳಿಸಿ ಪಾಲಕರಿಗೂ, ಶಾಲೆಗೂ ಹಾಗೂ ಸಂಸ್ಥೆಗೂ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಹಾಗೂ ಸಾಧನೆಗೆ ಕಾರಣರಾದ ಶಿಕ್ಷಕ ವೃಂದ ಹಾಗೂ ಸಹಕಾರ ನೀಡಿದ ಪಾಲಕವೃಂದದವರನ್ನು ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಹೇರಂಬ ಪಿ. ಹೆಗಡೆ ಹಾಗೂ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share