Thursday, July 23, 2026
Join WhatsApp Group
HomeLocal Newsಶ್ರೀ ಪ್ರಸನ್ನ ಗಣಪತಿ ವರ್ಧಂತಿ ಉತ್ಸವ ಮೇ 13ಕ್ಕೆ

ಶ್ರೀ ಪ್ರಸನ್ನ ಗಣಪತಿ ವರ್ಧಂತಿ ಉತ್ಸವ ಮೇ 13ಕ್ಕೆ

ಯಲ್ಲಾಪುರ: ಯಲ್ಲಾಪುರ ಪೊಲೀಸ್ ವಸತಿ ಗೃಹದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವರ 27ನೇ ವರ್ಷದ ವರ್ಧಂತಿ ಉತ್ಸವವನ್ನು ಮೇ 13ರಂದು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ವಸತಿ ಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆಯಿಂದ ಕಲಾವೃದ್ಧಿ ಹವನ ಹಾಗೂ ಗಣಪತಿ ಹವನ ನಡೆಯಲಿದ್ದು, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.

ಬಳಿಕ ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.ಮಧ್ಯಾಹ್ನ 1 ಗಂಟೆಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಸಮಸ್ತ ಭಕ್ತರು ಭಾಗವಹಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಸಮಸ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಕುಟುಂಬದವರು ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share