Monday, September 7, 2026
Join WhatsApp Group
HomeLocal Newsಶಿಕ್ಷಕಿಗೆ ಗುದ್ದಿದ ಬೈಕ್; ಸವಾರನ ವಿರುದ್ಧ ಪ್ರಕರಣ

ಶಿಕ್ಷಕಿಗೆ ಗುದ್ದಿದ ಬೈಕ್; ಸವಾರನ ವಿರುದ್ಧ ಪ್ರಕರಣ

ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಖಾಸಗಿ ಶಾಲಾ ಶಿಕ್ಷಕಿಗೆ ಅತಿವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಂಕೋಲಾ ತಾಲೂಕಿನ ಪೂಜಗೇರಿ ಸೇತುವೆ ಸಮೀಪ ನಡೆದಿದೆ.

ಜುಲೈ 31ರಂದು ಸಂಜೆ 5 ಗಂಟೆ ಸುಮಾರಿಗೆ ಶಟಗೇರಿ ನಿವಾಸಿ ವಿಘ್ನೇಶ್ ಗಣಪತಿ ನಾಯಕ ತನ್ನ ಕೆಎ-30/ವಿ-4218 ಸಂಖ್ಯೆಯ ಬೈಕ್‌ನಲ್ಲಿ ಮಂಜುಗುಣಿ ಕಡೆಯಿಂದ ಅಂಕೋಲಾ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬರುತ್ತಿದ್ದಾಗ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪೂಜಗೇರಿ ನಿವಾಸಿ, ಖಾಸಗಿ ಶಿಕ್ಷಕಿ ಶಿಲ್ಪಾ ವಿನಾಯಕ ಗಾಂವಕರ (32) ಅವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಶಿಲ್ಪಾ ಅವರ ತಲೆ, ಬಲಗೈ, ಬಲಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಅಪಘಾತದಲ್ಲಿ ಬೈಕ್ ಸವಾರ ವಿಘ್ನೇಶ್‌ಗೂ ಗಾಯಗಳಾಗಿವೆ.

ಗಾಯಾಳುವನ್ನು ಮೊದಲಿಗೆ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ವೈದ್ಯರ ಸಲಹೆ ಮೇರೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುವಿನ ಅತ್ತೆ ಲಕ್ಷ್ಮೀ ಕೋನು ಗಾಂವಕರ ನೀಡಿದ ದೂರಿನ ಮೇರೆಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share