Thursday, July 23, 2026
Join WhatsApp Group
HomeNationalಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರನ ಹತ್ಯೆ?!

ಪುಲ್ವಾಮಾ ದಾಳಿಯ ಪ್ರಮುಖ ಸಂಚುಗಾರನ ಹತ್ಯೆ?!

ನವದೆಹಲಿ: ಭಾರತದ ಇತಿಹಾಸದಲ್ಲೇ ಅತ್ಯಂತ ಭೀಕರ ಉಗ್ರರ ದಾಳಿಗಳಲ್ಲಿ ಒಂದಾದ 2019ರ ಪುಲ್ವಾಮಾ ಆತ್ಮಾಹುತಿ ದಾಳಿಯ ಪ್ರಮುಖ ಸಂಚುಗಾರರಲ್ಲಿ ಒಬ್ಬನಾಗಿದ್ದ ಹಮ್ಜಾ ಬುರ್ಹಾನ್ ಅಲಿಯಾಸ್ “ಡಾಕ್ಟರ್” ಪಾಕ್ ಆಕ್ರಮಿತ ಕಾಶ್ಮೀರದ (PoK) ಮುಜಾಫರಾಬಾದ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಮಾಹಿತಿಯ ಪ್ರಕಾರ, ತರಬೇತುದಾರನ ರೂಪದಲ್ಲಿ ಅಡಗಿಕೊಂಡಿದ್ದ ಹಮ್ಜಾ ಬುರ್ಹಾನ್ ಮೇಲೆ ಕೆಲ ಅಪರಿಚಿತರು ಕಚೇರಿಯೊಳಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ದಾಳಿಕೋರರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೆಥ್ಪೋರಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಯೋಧರ ವಾಹನದ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಈ ದಾಳಿಯ ಹೊಣೆಗಾರಿಕೆಯನ್ನು ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿಕೊಂಡಿತ್ತು.

ಹಮ್ಜಾ ಬುರ್ಹಾನ್ ಈ ದಾಳಿಯ ಸಂಚು, ನೇಮಕಾತಿ ಹಾಗೂ ಗಡಿ ಪಾರ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಭಾರತೀಯ ಭದ್ರತಾ ಸಂಸ್ಥೆಗಳು ಆರೋಪಿಸಿದ್ದವು. ಆತ ಅಲ್-ಬದರ್ ಸಂಘಟನೆಯೊಂದಿಗೂ ಸಂಪರ್ಕ ಹೊಂದಿದ್ದನೆಂದು ವರದಿಗಳು ತಿಳಿಸಿವೆ.

ಆದರೆ, “ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್” ಎಂಬ ಕುರಿತು ವಿವಿಧ ಹಂತಗಳಲ್ಲಿ ಬೇರೆ ಉಗ್ರರ ಹೆಸರೂ ಹೊರಬಂದಿದ್ದವು. ಈ ಹಿಂದೆ ಮುದಾಸಿರ್ ಅಹ್ಮದ್ ಖಾನ್ ಹಾಗೂ ಅಬ್ದುಲ್ ರಶೀದ್ ಘಾಜಿ ಅವರನ್ನು ದಾಳಿಯ ಪ್ರಮುಖ ಸಂಚುಗಾರರು ಎಂದು ಭಾರತೀಯ ಭದ್ರತಾ ಪಡೆಗಳು ಗುರುತಿಸಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವ ಬಗ್ಗೆ ವರದಿಯಾಗಿತ್ತು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share