Friday, October 23, 2026
HomeLocal Newsಯಲ್ಲಾಪುರ | ಅ. 24ರಂದು ರಂಭಾಪುರಿ ಶ್ರೀಗಳ ಆಗಮನ, ಧರ್ಮಸಭೆ

ಯಲ್ಲಾಪುರ | ಅ. 24ರಂದು ರಂಭಾಪುರಿ ಶ್ರೀಗಳ ಆಗಮನ, ಧರ್ಮಸಭೆ

ಯಲ್ಲಾಪುರ: ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ 1008 ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಅ. 24ರಂದು ಯಲ್ಲಾಪುರದ ಕಲ್ಮಠದ ಶಿವಸಾನಿಧ್ಯ ಸಭಾಭವನದಲ್ಲಿ ನಡೆಯುವ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಲಿಂಗಯ್ಯ ಅಲ್ಲಯ್ಯನವರಮಠ, ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಲಿದ್ದು, ಬಳಿಕ ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಧರ್ಮಸಭೆಯಲ್ಲಿ ಸಮಾಜದ ಬಂಧುಗಳು ಹಾಗೂ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಗಜಾನನ ನಾಯ್ಕ ತಳ್ಳಿಕೇರಿ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share