Friday, June 19, 2026
HomeLocal Newsಬೈಕ್‌ಗೆ ಆಟೋ ಡಿಕ್ಕಿ; ಇಬ್ಬರಿಗೆ ಗಾಯ

ಬೈಕ್‌ಗೆ ಆಟೋ ಡಿಕ್ಕಿ; ಇಬ್ಬರಿಗೆ ಗಾಯ

ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಆಟೋದಲ್ಲಿದ್ದ ಪ್ರಯಾಣಿಕ ಗಾಯಗೊಂಡ ಘಟನೆ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಮಟಾ ತಾಲೂಕಿನ ಮಚ್ಚಗೊಂಡ ನಿವಾಸಿ ಅರವಿಂದ ಬೊಮ್ಮಾಯಿ ಹೊಸ್ಕಟ್ಟಾ (70) ಅವರು ಜೂನ್ 12ರಂದು ಮಧ್ಯಾಹ್ನ ತಮ್ಮ ಬೈಕ್‌ನಲ್ಲಿ ಮುರ್ಡೇಶ್ವರದಿಂದ ಭಟ್ಕಳ ಕಡೆಗೆ ತೆರಳುತ್ತಿದ್ದರು. ಮಾವಿನಕಟ್ಟಾ ಕ್ರಾಸ್ ಸಮೀಪ ಸಣ್ಣಬಾವಿ ಕಡೆಗೆ ತಿರುಗಲು ಬಲಭಾಗದ ಇಂಡಿಕೇಟರ್ ಹಾಕಿ ಬೈಕ್ ತಿರುಗಿಸುತ್ತಿದ್ದ ವೇಳೆ, ಹಿಂದಿನಿಂದ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ.

ಆಟೋವನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಚಾಲಕ ವಸಂತ ನಾಯ್ಕ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅರವಿಂದ ಹೊಸ್ಕಟ್ಟಾ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಕೂಡ ಪಲ್ಟಿಯಾಗಿದ್ದು, ಅದರಲ್ಲಿದ್ದ ಪ್ರಯಾಣಿಕ ಚಂದ್ರಕಾಂತ ಮೊಗೇರ (62) ಅವರಿಗೆ ಕಾಲಿಗೆ ಗಾಯಗಳಾಗಿವೆ.

ಘಟನೆ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share