ಮುಂಡಗೋಡ: ಜಿಲ್ಲಾದ್ಯಂತ ಆರಂಭಗೊಂಡಿರುವ ದಶಲಕ್ಷ ಗಿಡ ನೆಡುವ ಅಭಿಯಾನದ ಅಂಗವಾಗಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಸೋಮವಾರ ಮುಂಡಗೋಡಕ್ಕೆ ಭೇಟಿ ನೀಡಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ಶಿವಾನಂದ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜೂನ್ 22ರಂದು ಬೆಳಿಗ್ಗೆ 10 ಗಂಟೆಗೆ ನಂದಿಕಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮಪುರ ಕ್ಷೇತ್ರದಲ್ಲಿ ವಿಶೇಷ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ.
ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಗ್ರೀನ್ ಕಾರ್ಡ್ ಪ್ರಮುಖರು ಹಾಗೂ ಪರಿಸರಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ.