Friday, July 24, 2026
Join WhatsApp Group
HomeLocal Newsರೆಡ್ ಅಲರ್ಟ್; ನಾಳೆ ಈ ಐದು ತಾಲೂಕುಗಳ ಶಾಲೆಗೆ ರಜೆ!

ರೆಡ್ ಅಲರ್ಟ್; ನಾಳೆ ಈ ಐದು ತಾಲೂಕುಗಳ ಶಾಲೆಗೆ ರಜೆ!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 7ರಿಂದ ಮುಂದಿನ ಎರಡು ದಿನಗಳವರೆಗೆ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಅಂಗನವಾಡಿಗಳಿಗೆ ಜುಲೈ 7ರಂದು ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಮಕ್ಕಳಿಗೆ ಅನಾನುಕೂಲವಾಗದಂತೆ ಹಾಗೂ ಅವಘಡಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ರಜೆ ನೀಡುವುದು ಅಗತ್ಯವೆಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಆದೇಶವನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರವಾರ/ಶಿರಸಿ ಅವರು ತಕ್ಷಣವೇ ಕಾರ್ಯರೂಪಕ್ಕೆ ತರಬೇಕೆಂದು ಸೂಚಿಸಲಾಗಿದೆ. ಜೊತೆಗೆ, ರಜೆ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಸಂಬಂಧಿತ ಇಲಾಖೆಗಳಿಗೂ ಸೂಚನೆ ನೀಡಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share