Friday, July 24, 2026
Join WhatsApp Group
HomeLocal Newsಯೋಜನೆಯ ಸಂಪೂರ್ಣ ಮಾಹಿತಿ ತಿಳಿಸಿ

ಯೋಜನೆಯ ಸಂಪೂರ್ಣ ಮಾಹಿತಿ ತಿಳಿಸಿ

ಅಸಂಘಟಿತ ವಲಯದ ಕಾರ್ಮಿಕರನ್ನು ಪಿಂಚಣಿ ಯೋಜನೆಗೆ ನೋಂದಣಿ ಮಾಡಿ: ಡಿಸಿ

ಕಾರವಾರ: ಜಿಲ್ಲೆಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರನ್ನು ಪ್ರಧಾನಮಂತ್ರಿ ಮಾನ್–ಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆಗೆ ನೋಂದಣಿ ಮಾಡುವ ಸಂದರ್ಭದಲ್ಲಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಸಿ ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್–ಧನ್ ಯೋಜನೆಯ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಈ ಯೋಜನೆಯ ವ್ಯಾಪ್ತಿಗೊಳಪಡಿಸಬೇಕು ಹಾಗೂ ಯೋಜನೆಯ ಕುರಿತು ಕಾರ್ಮಿಕರಲ್ಲಿ ಅರಿವು ಮೂಡಿಸಬೇಕು ಎಂದ ಅವರು, ಸರ್ಕಾರದ ಯೋಜನೆಗಳು ಯಶಸ್ವಿಯಾಗಬೇಕಾದರೆ ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಸಂಪೂರ್ಣ ಮಾಹಿತಿ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು, ಕಾರ್ಮಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿನ ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರು, ಮನರೇಗಾ ಕೂಲಿ ಕಾರ್ಮಿಕರು, ಮನೆ ಕೆಲಸದವರು, ಅಗಸರು, ಕೈಮಗ್ಗ ಕಾರ್ಮಿಕರು ಸೇರಿದಂತೆ ಅಸಂಘಟಿತ ಅರ್ಹ ಕಾರ್ಮಿಕರನ್ನು ಗುರುತಿಸಿ, ಮಾರ್ಚ್ 15ರವರೆಗೆ ನಡೆಯುವ ವಿಶೇಷ ನೋಂದಣಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಬೇಕು ಎಂದರು.

ಕಾರ್ಮಿಕ ಅಧಿಕಾರಿ ಲಲಿತಾ ಸಾತೇನಹಳ್ಳಿ ಮಾತನಾಡಿ, 18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಎ.ಎಸ್.ಸಿ ಸೆಂಟರ್‌ಗಳಲ್ಲಿ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪ್ರತಿ ಸಲ್ಲಿಸಿ ಯೋಜನೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.

ಸಭೆಯಲ್ಲಿ ಕಾರ್ಮಿಕ ಅಧಿಕಾರಿ ವೀಣಾ ಮಾಸ್ತಿ, ಪೌರಾಯುಕ್ತ ಜಗದೀಶ ಹುಲಿಗಜ್ಜಿ, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪ್ರತೀಕ ಶೆಟ್ಟಿ, ವಿವಿಧ ಕಾರ್ಮಿಕ ಸಂಘಟನೆಯ ಮುಖಂಡರು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share