ಮೈಸೂರು :ಬೆಟ್ಟದಪುರ ಸಮೀಪದ ಭುವನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗ್ರೂಪ್-ಡಿ ಸಿಬ್ಬಂದಿಯಾಗಿ ಹಲವು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಷಹನಾ ವಾಜ್ ಅವರಿಗೆ ಆರೋಗ್ಯ ಕೇಂದ್ರದ ವತಿಯಿಂದ ಭಾವಪೂರ್ಣ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ. ಸತೀಶ್ ಬಿ.ಎಂ ಮಾತನಾಡಿ, “ಷಹನಾ ವಾಜ್ ಅವರು ತಮ್ಮ ಸೇವಾ ಅವಧಿಯಲ್ಲಿ ಶಿಸ್ತು, ನಿಷ್ಠೆ ಹಾಗೂ ಮಾನವೀಯತೆಯಿಂದ ಕಾರ್ಯನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಸೇವೆ ಆರೋಗ್ಯ ಇಲಾಖೆಗೆ ಮಾದರಿಯಾಗಿದೆ” ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷಾಧಿಕಾರಿಗಳಾದ ಉಷಾ ಬಿ.ಎಲ್, ಕೆ.ಆರ್ ಶಶಿ, ಉದಯಕುಮಾರಿ, ಆರೋಗ್ಯ ನಿರೀಕ್ಷಕ ಮಂಜು ಡಿ, ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಪುನೀತ್ ಕುಮಾರ್ ಹಾಗೂ ಆಶಾ ಕಾರ್ಯಕರ್ತೆಯರಾದ ನಾಗಮಣಿ, ಶೋಭಾ, ರುಕ್ಮಿಣಿ, ಯಶೋಧ, ಸಾವಿತ್ರಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದು, ನಿವೃತ್ತ ಸಿಬ್ಬಂದಿಗೆ ಶುಭ ಹಾರೈಸಿದರು