Friday, July 24, 2026
Join WhatsApp Group
HomeLocal Newsರೌಡಿ ಶೀಟರ್ ‘ಜ್ಯಾಕ್’ 6 ತಿಂಗಳು ಗಡಿಪಾರು

ರೌಡಿ ಶೀಟರ್ ‘ಜ್ಯಾಕ್’ 6 ತಿಂಗಳು ಗಡಿಪಾರು

ಕಾರವಾರ: ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಸೂರ್ಯಕಾಂತ ಅಲಿಯಾಸ್ ಜ್ಯಾಕ್ (27) ವಿರುದ್ಧ 6 ತಿಂಗಳ ಕಾಲ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಜಾರಿಗೊಂಡಿದೆ.

ಸೂರ್ಯಕಾಂತ @ ಜ್ಯಾಕ್, ತಂದೆ ಚಂದ್ರಕಾಂತ ಕಳಸ, ನಿವಾಸಿ ಕಳಸವಾಡ, ಬಾಡ ಈತನ ವಿರುದ್ಧ ಹಲವು ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಜೂಜಾಟ, ಹಲ್ಲೆ, ಜೀವಬೆದರಿಕೆ, ಕೊಲೆ ಯತ್ನ, ಗಲಭೆ, ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು. ಕಾರವಾರ ಗ್ರಾಮೀಣ ಠಾಣೆಯಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಈತನ ಮೇಲೆ ಈಗಾಗಲೇ ರೌಡಿ ಶೀಟ್‌ ತೆರೆಯಲಾಗಿದ್ದು, ಚಲನವಲನಗಳ ಮೇಲೆ ನಿಗಾ ವಹಿಸಲಾಗುತ್ತಿತ್ತು. ಆದರೂ ಸಹ ಸೂರ್ಯಕಾಂತ ತನ್ನ ಕ್ರಿಮಿನಲ್ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾರವಾರ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು, ಸೂರ್ಯಕಾಂತನ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವರವಾದ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ, ಅಭಿಯೋಜನೆ ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿದ ಬಳಿಕ, ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಗಡಿಪಾರು ಆದೇಶ ಹೊರಡಿಸಿದ್ದಾರೆ.

2026ರ ಏಪ್ರಿಲ್ 22ರಿಂದ ಜಾರಿಗೆ ಬರುವಂತೆ ಸೂರ್ಯಕಾಂತನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.

ಏಪ್ರಿಲ್ 27ರಂದು ಕಾರವಾರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೂರ್ಯಕಾಂತನನ್ನು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.

ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share