Friday, July 24, 2026
Join WhatsApp Group
HomeLocal Newsರೈತ ಬಂಧುವಾದ ವಿಶ್ವೇಶ್ವರ ಹೆಗಡೆ ಕಾಗೇರಿ!

ರೈತ ಬಂಧುವಾದ ವಿಶ್ವೇಶ್ವರ ಹೆಗಡೆ ಕಾಗೇರಿ!

ಸಂಸದರನ್ನು ಹಾಡಿ ಹೊಗಳಿದ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ

ಶಿರಸಿ: ಜಿಲ್ಲೆಯ ಅಡಕೆ, ಕಾಳುಮೆಣಸು, ಮಾವು ಬೆಳೆಯುವ ರೈತರು ದೀರ್ಘಕಾಲದಿಂದ ನಿರೀಕ್ಷಿಸುತಿದ್ದ ಹವಾಮಾನ ಆಧಾರಿತ ಬೆಳೆವಿಮೆಯ ಮೊತ್ತವು ಇಂದಿನಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಪ್ರಾರಂಭವಾಗಿದೆ.

ಸಂಕಷ್ಟದ ಕಾಲದಲ್ಲಿ ರೈತರ ಜೊತೆಗೆ ಎಂದಿನಂತೆ ನಿಂತಿರುವ ಸಂಸದರಾದ ಕಾಗೇರಿಯವರನ್ನು ಮುಕ್ತಕಂಠದಿಂದ ಅಭಿನಂದಿಸುವುದಾಗಿ ಬಿಜೆಪಿ ರೈತಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿನ ರೈತರು ಎಲೆ ಚುಕ್ಕಿ ರೋಗದ ಬಾಧೆ ಮತ್ತು ಅಡಕೆ, ಮಾವು, ಕಾಳು ಮೆಣಸು ಸೇರಿದಂತೆ ಬಹುತೇಕ ಬೆಳೆಯ ಇಳುವರಿ ಕುಂಠಿತಗೊಂಡು ಆರ್ಥಿಕ ಸಂಕಷ್ಟದಲ್ಲಿದ್ದಾಗ ರೈತರ ಪರವಾಗಿ ರಾಜ್ಯ ಸರ್ಕಾರವು ಸಂಪೂರ್ಣ ನಿರ್ಲಕ್ಷ್ಯವಹಿಸಿದ್ದರೂ ಸಹ, ನಮ್ಮ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸತತ ಪ್ರಯತ್ನಪಟ್ಟು ಕೇಂದ್ರ ಸರ್ಕಾರದ ಮಟ್ಟದಲ್ಲಿ ಬೆನ್ನತ್ತಿಹೋಗಿ ಈ ವಿಮಾ ಮೊತ್ತವನ್ನು ಮಂಜೂರಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲ ಹಂತವಾಗಿ ಇಂದು ಸುಮಾರು 14 ಕೋಟಿ ರೂಪಾಯಿಗಳ ಬೃಹತ್ ಮೊತ್ತವು ಅರ್ಹ ರೈತರ ಖಾತೆಗಳನ್ನು ತಲುಪಿದ್ದು, ಈ ಪ್ರಕ್ರಿಯೆಯು ಇಂದಿನಿಂದ ಸತತವಾಗಿ ಮುಂದುವರಿಯಲಿದೆ.

ಸುಮಾರು 74 ಕೋಟಿ ರೂಪಾಯಿಗಳ ವಿಮೆ ಹಣ ಮುಂದಿನ ದಿನದಲ್ಲಿ ರೈತರ ಖಾತೆಗಳಿಗೆ ಹಂತ ಹಂತವಾಗಿ ಜಮೆಯಾಗಲಿದೆ.

ತಾಂತ್ರಿಕ ಕಾರಣಗಳಿಂದ ಕೆಲ ದಿನ ವಿಳಂಬವಾಗಿದ್ದರೂ ರೈತರ ಸಂಕಷ್ಟಕ್ಕೆ ಸ್ಪಂದಿಸಿ ವಿಮೆ ಮೊತ್ತ ಬಿಡುಗಡೆಗೊಳಿಸಲು ಶ್ರಮಿಸಿದ ಪ್ರಧಾನಿ Narendra Modi, ಕೇಂದ್ರ ಕೃಷಿ ಸಚಿವ Shivraj Singh Chouhan ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜಿಲ್ಲೆಯ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share