Monday, September 7, 2026
Join WhatsApp Group
HomeLocal Newsಗ್ರಾಮೀಣ ನಿರುದ್ಯೋಗಿಗಳಿಗೆ ರುಡ್‌ಸೆಟ್‌ನಿಂದ ಸುವರ್ಣಾವಕಾಶ

ಗ್ರಾಮೀಣ ನಿರುದ್ಯೋಗಿಗಳಿಗೆ ರುಡ್‌ಸೆಟ್‌ನಿಂದ ಸುವರ್ಣಾವಕಾಶ

ಕಾರವಾರ: ಸ್ವಯಂ ಉದ್ಯೋಗ ಆರಂಭಿಸಲು ಬಯಸುವ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ನ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ರುಡ್‌ಸೆಟ್ ಸಂಸ್ಥೆ ವಿವಿಧ ವೃತ್ತಿಪರ ತರಬೇತಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ.

ಆಗಸ್ಟ್‌ 17ರಿಂದ 12 ದಿನಗಳ ಕೋಳಿ ಸಾಕಾಣಿಕೆ, ಆಗಸ್ಟ್‌ 20ರಿಂದ 31 ದಿನಗಳ ಎಂಬ್ರಾಯ್ಡರಿ, ಆಗಸ್ಟ್‌ 31ರಿಂದ 12 ದಿನಗಳ ಕುರಿ ಮತ್ತು ಮೇಕೆ ಸಾಕಾಣಿಕೆ, ಸೆಪ್ಟೆಂಬರ್‌ 1ರಿಂದ 13 ದಿನಗಳ ಸಿಸಿಟಿವಿ ತಂತ್ರಜ್ಞಾನ, ಸೆಪ್ಟೆಂಬರ್‌ 15ರಿಂದ 10 ದಿನಗಳ ಅಣಬೆ ಕೃಷಿ ಹಾಗೂ ಸೆಪ್ಟೆಂಬರ್‌ 17ರಿಂದ 31 ದಿನಗಳ ಟೈಲರಿಂಗ್ ತರಬೇತಿಗಳನ್ನು ಉಚಿತವಾಗಿ ಆಯೋಜಿಸಲಾಗಿದೆ.

18ರಿಂದ 50 ವರ್ಷದೊಳಗಿನ ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಜೊತೆಗೆ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ.

ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಿದವರಿಗೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಚೇರಿಯನ್ನು ಅಥವಾ-9481506564, 9241482541, 9380162042, 9113880324 ಮೊಬೈಲ್ ಸಂಖ್ಯೆಗಳ ಮೂಲಕ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಶಾಖೆಯ ನಿರ್ದೇಶಕ ಗಿರಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share