Monday, September 7, 2026
Join WhatsApp Group
HomeLocal Newsದ.ಕ, ಶಿವಮೊಗ್ಗ ಪಕ್ಷ ಸಂಯೋಜಕರಾಗಿ ರೂಪಾಲಿ ನಾಯ್ಕ ನೇಮಕ

ದ.ಕ, ಶಿವಮೊಗ್ಗ ಪಕ್ಷ ಸಂಯೋಜಕರಾಗಿ ರೂಪಾಲಿ ನಾಯ್ಕ ನೇಮಕ

ಕಾರವಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಅವರಿಗೆ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಪಕ್ಷ ಸಂಯೋಜಕರ ಜವಾಬ್ದಾರಿ ನೀಡಲಾಗಿದೆ.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯ ಪದಾಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದ್ದು, ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಇದರೊಂದಿಗೆ, ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೂಪಾಲಿ ಎಸ್. ನಾಯ್ಕ ಹಾಗೂ ಮಾಜಿ ಶಾಸಕ ಸುನೀಲ್‌ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷ ಸಂಘಟನೆಯಲ್ಲಿ ಸಕ್ರಿಯ ಪಾತ್ರ

ರೂಪಾಲಿ ಎಸ್.ನಾಯ್ಕ ಅವರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿ ರಾಜ್ಯ ಉಪಾಧ್ಯಕ್ಷೆಯಾಗಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ನಡೆಸಿ ಪಕ್ಷದ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಪಕ್ಷದ ಸಂಘಟನೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಸಂಯೋಜಕರ ಜವಾಬ್ದಾರಿ ವಹಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share