Sunday, June 14, 2026
HomeStateಅರೆಕಾಲಿಕ ವರದಿಗಾರರಿಗೂ ಉಚಿತ ಬಸ್ ಪಾಸ್‌!

ಅರೆಕಾಲಿಕ ವರದಿಗಾರರಿಗೂ ಉಚಿತ ಬಸ್ ಪಾಸ್‌!

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದುಹಾಕಿ ನಿಯಮಾವಳಿಯನ್ನು ಸರಳೀಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಇದನ್ನು ಸ್ವಾಗತಿಸಿದೆ.

ಬೀದರದಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕೆಯುಡಬ್ಲ್ಯೂಜೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಯೋಜನೆಯಲ್ಲಿನ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.

ಬಳಿಕ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಸಂದರ್ಭದಲ್ಲಿ ಕೆಯುಡಬ್ಲ್ಯೂಜೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಈ ಕುರಿತು ವಾರದೊಳಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು.

ಮುಖ್ಯಮಂತ್ರಿಗಳ ಸೂಚನೆಯಂತೆ ಇದೀಗ ಹೊಸ ಆದೇಶ ಹೊರಬಿದ್ದಿದ್ದು, ಪೂರ್ಣಾವಧಿ ಪತ್ರಕರ್ತರಿಗೆ ಮಾತ್ರ ಸೀಮಿತವಾಗಿದ್ದ ಯೋಜನೆಯನ್ನು ಅರೆಕಾಲಿಕ ವರದಿಗಾರರಿಗೂ ವಿಸ್ತರಿಸಲಾಗಿದೆ. ಜೊತೆಗೆ, ಬಸ್ ಪಾಸ್ ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಹೊಂದಿರುವ ಬ್ಯಾಂಕ್ ಸ್ಟೇಟ್‌ಮೆಂಟ್ ಸಲ್ಲಿಕೆ ಕಡ್ಡಾಯ ಎಂಬ ಷರತ್ತನ್ನೂ ಸರ್ಕಾರ ಕೈಬಿಟ್ಟಿದೆ.

ಕೆಯುಡಬ್ಲ್ಯೂಜೆಯ ಸತತ ಹೋರಾಟಕ್ಕೆ ಸ್ಪಂದಿಸಿ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನೆ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share