Ad
Home Crime ಸ್ಕೂಟಿ-ಕಾರು ಡಿಕ್ಕಿ: ಚಿಕಿತ್ಸೆ ಫಲಿಸದೆ ಸವಾರ ಸಾವು

ಸ್ಕೂಟಿ-ಕಾರು ಡಿಕ್ಕಿ: ಚಿಕಿತ್ಸೆ ಫಲಿಸದೆ ಸವಾರ ಸಾವು

0
13
A close-up photo of police lights at night

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಮುದ್ದಿನಗದ್ದೆ ಕ್ರಾಸ್ ಸಮೀಪ ಸಂಭವಿಸಿದ್ದ ಸ್ಕೂಟಿ ಮತ್ತು ಕಾರಿನ ನಡುವಿನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಜೂನ್ 13ರಂದು ಬೆಳಿಗ್ಗೆ ಸುಮಾರು 10.14 ಗಂಟೆಗೆ ಅಂಕೋಲಾ ಕಡೆಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸ್ಕೂಟಿ (ಕೆಎ-31/ಇಜಿ-0658) ಮತ್ತು ಎದುರಿನಿಂದ ಬರುತ್ತಿದ್ದ ಕಾರು (23-ಬಿಎಚ್-6731) ನಡುವೆ ಮುದ್ದಿನಗದ್ದೆ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು.

ಅಪಘಾತದಲ್ಲಿ ಸ್ಕೂಟಿ ಚಾಲಕ, ಹಿಟ್ಟಿನಬೈಲ-ಕನ್ನಡಗಲ್ಲ ನಿವಾಸಿ ರಾಘವೇಂದ್ರ ಚೂಡಾಮಣಿ ಮರಾಠಿ (41) ಗಂಭೀರವಾಗಿ ಗಾಯಗೊಂಡಿದ್ದರು. ಸ್ಕೂಟಿಯ ಹಿಂಬದಿ ಸವಾರ ದಯಾನಂದ ಚಂದ್ರು ನಾಯ್ಕ ಅವರಿಗೂ ತಲೆ, ಕೆನ್ನೆ, ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದವು. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದವು.

ಘಟನೆಯ ಸಂಬಂಧ ಕಾರು ಚಾಲಕ ಅಭಿಷೇಕ್ ಸಾರಸ್ವತ್ ಅವರ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗಾಯಾಳು ರಾಘವೇಂದ್ರ ಅವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂನ್ 14ರಂದು ಸಂಜೆ ಅವರು ಮೃತಪಟ್ಟಿದ್ದಾರೆ.

Previous articleಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ
Next articleಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!