Friday, October 23, 2026
HomeLocal Newsಶಾಲ್ಮಲೆಯ ಮಡಿಲಲ್ಲಿ ಉಭಯ ಶ್ರೀಗಳ ಚಾತುರ್ಮಾಸ್ಯ ಸಂಪನ್ನ

ಶಾಲ್ಮಲೆಯ ಮಡಿಲಲ್ಲಿ ಉಭಯ ಶ್ರೀಗಳ ಚಾತುರ್ಮಾಸ್ಯ ಸಂಪನ್ನ

ಶಿರಸಿ: ಗಂಗೆಯ ಆರಾಧನೆ, ಮಂತ್ರಘೋಷದ ನಡುವೆ ನಡೆದ ಸೀಮೋಲ್ಲಂಘನದೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ನಡೆದ ಧಾರ್ಮಿಕ ಕ್ಷಣಗಳಿಗೆ ಶನಿವಾರ ಪವಿತ್ರ ಶಾಲ್ಮಲಾ ತೀರ ಸಾಕ್ಷಿಯಾಯಿತು.

ಸ್ವರ್ಣವಲ್ಲಿಯಲ್ಲಿ ನಾಲ್ಕು ತಿಂಗಳ ಕಾಲ ಶ್ರದ್ಧಾ-ಭಕ್ತಿಗಳಿಂದ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿದ್ದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಹಾಗೂ ಅವರ ಕರಕಮಲಸಂಜಾತ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳು ವ್ರತವನ್ನು ಸಂಪನ್ನಗೊಳಿಸಿ ಸೀಮೋಲ್ಲಂಘನ ನೆರವೇರಿಸಿದರು.

ವ್ರತದ ಸಮಾರೋಪದ ಅಂಗವಾಗಿ ಉಭಯ ಶ್ರೀಗಳು ಶಾಲ್ಮಲಾ ನದಿಯ ತೀರದಲ್ಲಿ ಶಾಸ್ತ್ರೋಕ್ತವಾಗಿ ಗಂಗಾಪೂಜೆ ನೆರವೇರಿಸಿದರು. ಜಲದೇವತೆಯಾದ ಗಂಗೆಯ ಅನುಗ್ರಹಕ್ಕಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಸಾಂಪ್ರದಾಯಿಕವಾಗಿ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ವಿಧಿವಿಧಾನಗಳನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಗಮಿಸಿ ಉಭಯ ಶ್ರೀಗಳ ಆಶೀರ್ವಾದ ಪಡೆದರು.

ಶಾಲ್ಮಲಾ ತೀರದ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಉಭಯ ಶ್ರೀಗಳು ಸೋಂದಾದ ಐತಿಹಾಸಿಕ ಹಾಗೂ ಪುರಾತನ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ಸದಾಶಿವ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ಉಭಯ ಶ್ರೀಗಳು, ವಿಶೇಷ ಅರ್ಚನೆ ಹಾಗೂ ಮಂಗಳಾರತಿ ನೆರವೇರಿಸಿ ನಾಡಿನ ಕ್ಷೇಮಾಭಿವೃದ್ಧಿಗಾಗಿ ಪ್ರಾರ್ಥಿಸಿದರು.

ಚಾತುರ್ಮಾಸ್ಯ ವ್ರತ ಪೂರ್ಣಗೊಳಿಸಿ ಸೀಮೋಲ್ಲಂಘನ ನೆರವೇರಿಸಿದ ಉಭಯ ಶ್ರೀಗಳನ್ನು ಸ್ವಾಗತಿಸಲು ದೇವಸ್ಥಾನದ ಆಡಳಿತ ಮಂಡಳಿ, ಧಾರ್ಮಿಕ ಮುಖಂಡರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು. ಈ ಮೂಲಕ ಸ್ವರ್ಣವಲ್ಲಿಯಲ್ಲಿ ಆರಂಭಗೊಂಡಿದ್ದ ನಾಲ್ಕು ತಿಂಗಳ ಚಾತುರ್ಮಾಸ್ಯ ವ್ರತಾಚರಣೆ ಭಕ್ತಿಭಾವದೊಂದಿಗೆ ಸಮಾರೋಪಗೊಂಡಿತು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share