Friday, July 24, 2026
Join WhatsApp Group
HomeStateಹಳ್ಳಕ್ಕೆ ಉರುಳಿದ ಬಸ್‌, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಳ್ಳಕ್ಕೆ ಉರುಳಿದ ಬಸ್‌, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದ ಸಮೀಪ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿಯಿಂದ ಭದ್ರಾವತಿಗೆ ತೆರಳುತ್ತಿದ್ದ ‘ಶ್ರೀ ರೇಣುಕಾಂಬ’ ಹೆಸರಿನ ಖಾಸಗಿ ಬಸ್‌ ಸೇತುವೆ ಸಮೀಪ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ನಡೆದಿದೆ. ಅಪಘಾತದ ಪರಿಣಾಮ ಬಸ್‌ ತೀವ್ರವಾಗಿ ಜಖಂಗೊಂಡಿದೆ.

ಅಪಘಾತದ ವೇಳೆ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದು, ಎಲ್ಲರೂ ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣವೇ ಭದ್ರಾವತಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಅತಿವೇಗ ಅಥವಾ ನಿರ್ಲಕ್ಷ್ಯದ ಚಾಲನೆ ಕಾರಣವಾಗಿರಬಹುದು ಎಂದು ಪ್ರಯಾಣಿಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ನಿಖರ ಕಾರಣವನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚಲಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share