Monday, September 7, 2026
Join WhatsApp Group
HomeUncategorizedವಿ.ಪ ಚುನಾವಣೆಯಲ್ಲಿ ಶಿವರಾಮ ಹೆಬ್ಬಾರ್ ಮತದಾನ

ವಿ.ಪ ಚುನಾವಣೆಯಲ್ಲಿ ಶಿವರಾಮ ಹೆಬ್ಬಾರ್ ಮತದಾನ

ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯ ಅಂಗವಾಗಿ ಯಲ್ಲಾಪುರ-ಮುಂಡಗೋಡ-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರು ಬುಧವಾರ ವಿಧಾನಸೌಧದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಮತ ಚಲಾಯಿಸಿದರು.

ಮತದಾನದ ಬಳಿಕ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ, ಯಲ್ಲಾಪುರ-ಮುಂಡಗೋಡ-ಬನವಾಸಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಕುರಿತು ಮನವಿ ಸಲ್ಲಿಸಿ ಚರ್ಚೆ ನಡೆಸಿದರು.

ಕ್ಷೇತ್ರದಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯ ವೃದ್ಧಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಯೋಜನೆಗಳಿಗೆ ಸರ್ಕಾರದಿಂದ ಅಗತ್ಯ ಅನುದಾನ ಮತ್ತು ಸಹಕಾರ ಒದಗಿಸುವಂತೆ ಹೆಬ್ಬಾರ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share