Friday, July 24, 2026
Join WhatsApp Group
HomeLocal Newsಶ್ರೀಕಾಂತ ತಾರಿಬಾಗಿಲು ನಿಧನಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಸಂತಾಪ

ಶ್ರೀಕಾಂತ ತಾರಿಬಾಗಿಲು ನಿಧನಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಸಂತಾಪ

ಯಲ್ಲಾಪುರ: ಶಿರಸಿ ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಜನಪ್ರತಿನಿಧಿ ಶ್ರೀಕಾಂತ ತಾರಿಬಾಗಿಲು ಅವರ ನಿಧನಕ್ಕೆ ಯಲ್ಲಾಪುರ–ಮುಂಡಗೋಡ–ಬನವಾಸಿ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಶ್ರೀಕಾಂತ ತಾರಿಬಾಗಿಲು ಅವರು ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಜನಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಸತತ ಐದು ಬಾರಿ ಶಿರಸಿ ನಗರಸಭೆಯ ಸದಸ್ಯರಾಗಿ ಹಾಗೂ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪರ ಆಡಳಿತಕ್ಕೆ ಹೆಸರಾಗಿದ್ದರು ಎಂದು ಸ್ಮರಿಸಿದ್ದಾರೆ.

ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಸರಳ ವ್ಯಕ್ತಿತ್ವ ಹಾಗೂ ಸಮಾಜಮುಖಿ ಚಿಂತನೆ ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಶಿರಸಿ ಭಾಗವು ಜನಪರ ನಾಯಕನನ್ನು ಕಳೆದುಕೊಂಡಿದ್ದು, ಸಾರ್ವಜನಿಕ ಬದುಕಿನಲ್ಲಿ ಅವರು ಸಲ್ಲಿಸಿದ ಸೇವೆ ಮತ್ತು ಸಮಾಜದ ಮೇಲಿನ ಕಾಳಜಿ ಸದಾ ಜನರ ಮನಸ್ಸಿನಲ್ಲಿ ಉಳಿಯಲಿದೆ ಎಂದು ಶಾಸಕ ಹೆಬ್ಬಾರ್ ಹೇಳಿದ್ದಾರೆ.

ದಿವಂಗತ ಶ್ರೀಕಾಂತ ತಾರಿಬಾಗಿಲು ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಪ್ರಾರ್ಥಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share