Friday, July 24, 2026
Join WhatsApp Group
HomeLocal Newsಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ

ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ

ಯಲ್ಲಾಪುರ: ಗ್ರಾಮೀಣ ಭಾಗಗಳ ಅಭಿವೃದ್ಧಿಗೆ, ಮೂಲಸೌಕರ್ಯ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ನಂದೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಣಲಗಾರ ಗೋಪಾಲಕೃಷ್ಣ ದೇವಾಲಯದ ಸಮೀಪ ಹಿತ್ಲಕಾರಗದ್ದೆ – ಮಾಗೋಡ ಜಿಲ್ಲಾ ಮುಖ್ಯ ರಸ್ತೆ ಹಾಗೂ ನಂದೊಳ್ಳಿ – ಅಣಲಗಾರ ಗೋಪಾಲಕೃಷ್ಣ ದೇವಸ್ಥಾನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸುಮಾರು 9.90 ಕೋಟಿ ರೂ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ರಸ್ತೆ ಕಾಮಗಾರಿಯಿಂದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆಗೆ ಹೊಸ ಚೈತನ್ಯ ದೊರೆಯಲಿದ್ದು, ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಉತ್ತಮ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದೂ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಕಾಮಗಾರಿಗೆ ಶುಭ ಹಾರೈಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share