Monday, September 7, 2026
Join WhatsApp Group
HomeLocal Newsಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಿ; ಶಾಸಕ ಹೆಬ್ಬಾರ್

ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಿ; ಶಾಸಕ ಹೆಬ್ಬಾರ್

ಯಲ್ಲಾಪುರ: ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದ್ದು, ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಪಟ್ಟಣದ ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು, ಸಂಸ್ಕಾರ ಹಾಗೂ ಸಾಮಾಜಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಇದಕ್ಕೂ ಮೊದಲು ಗಿಡಕ್ಕೆ ನೀರುಣಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು. ಹೊಸ ಶೈಕ್ಷಣಿಕ ವರ್ಷದ ಆರಂಭದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು, ಪಾಲಕರು ಹಾಗೂ ಸಮಾಜದ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಪಾಲಕರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share