Friday, October 23, 2026
HomeLocal Newsನದಿ ಜೋಡಣೆ ವಿರೋಧಿ ಹೋರಾಟಕ್ಕೆ ಶಾಸಕ ಹೆಬ್ಬಾರ್‌ ಬೆಂಬಲ

ನದಿ ಜೋಡಣೆ ವಿರೋಧಿ ಹೋರಾಟಕ್ಕೆ ಶಾಸಕ ಹೆಬ್ಬಾರ್‌ ಬೆಂಬಲ

ಬೆಂಗಳೂರು: ಬೇಡ್ತಿ–ವರದಾ ಮತ್ತು ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಬೆಂಬಲ ನೀಡುವುದಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶನಿವಾರ ನಡೆದ ನದಿ ಜೋಡಣೆ ಯೋಜನೆಗಳ ವಿರೋಧಿ ಧರಣಿಯಲ್ಲಿ ಪಾಲ್ಗೊಂಡ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರು ಶಾಸಕರ ಸಂದೇಶವನ್ನು ಹೋರಾಟಗಾರರಿಗೆ ತಿಳಿಸಿದರು.

‘ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ಜಿಲ್ಲೆ ಉಳಿಸಿ’ ಎಂಬ ಘೋಷವಾಕ್ಯದಡಿ ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಆಯೋಜಿಸಿದ್ದ ಧರಣಿಗೆ ಶಿವರಾಮ ಹೆಬ್ಬಾರ್ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟದ ಪರಿಸರ ಸಮತೋಲನ, ನದಿಗಳ ನೈಸರ್ಗಿಕ ಹರಿವು ಹಾಗೂ ಉತ್ತರ ಕನ್ನಡ ಜಿಲ್ಲೆಯ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದಾದ ಇಂತಹ ಅವೈಜ್ಞಾನಿಕ ನದಿ ಜೋಡಣೆ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ ಎಂಬ ಸಂದೇಶವನ್ನು ವಿವೇಕ್ ಹೆಬ್ಬಾರ್ ಮೂಲಕ ರವಾನಿಸಿದ್ದಾರೆ.

ಪಶ್ಚಿಮ ಘಟ್ಟದ ಸಂರಕ್ಷಣೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಹಿತಾಸಕ್ತಿಯ ರಕ್ಷಣೆಯೇ ಆದ್ಯತೆಯಾಗಿದ್ದು, ಸ್ವರ್ಣವಲ್ಲಿ ಸಂಸ್ಥಾನದ ಪರಮಪೂಜ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಶಾಸಕರು ತಿಳಿಸಿದ್ದಾರೆ. ಜಿಲ್ಲೆಯ ಪ್ರಕೃತಿ ಸಂಪತ್ತು ಮತ್ತು ಜನಜೀವನಕ್ಕೆ ಧಕ್ಕೆಯಾಗದಂತೆ ಎಲ್ಲರೂ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂಬ ಸಂದೇಶವನ್ನೂ ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share