Friday, July 24, 2026
Join WhatsApp Group
HomeLocal Newsಪದಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ: ಶಾಸಕ ಹೆಬ್ಬಾರ್

ಪದಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಿ: ಶಾಸಕ ಹೆಬ್ಬಾರ್

ಬನವಾಸಿ: ವಿಶೇಷ ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್.) ಕಾರ್ಯಕ್ರಮವನ್ನು ಅತ್ಯಂತ ಜವಾಬ್ದಾರಿಯಿಂದ ಅನುಷ್ಠಾನಗೊಳಿಸಬೇಕು. ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಸೋಮವಾರ ಬನವಾಸಿ ಹೋಬಳಿ ವ್ಯಾಪ್ತಿಯ ಉಂಚಳ್ಳಿ, ಅಂಡಗಿ, ಬಂಕನಾಳ, ಬಿಸ್ಲಕೊಪ್ಪ ಹಾಗೂ ದಾಸನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಎಸ್‌ಐಆರ್. ಕಾರ್ಯಕ್ರಮದ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮತದಾರರ ಪಟ್ಟಿಯನ್ನು ನಿಖರ ಹಾಗೂ ದೋಷರಹಿತವಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಅರ್ಹ ಮತದಾರರ ಹೆಸರನ್ನು ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರಿಗೆ ಸೂಚಿಸಿದರು. ಎಸ್‌ಐಆರ್. ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು.

ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಮಾತನಾಡಿ, ಎಸ್‌ಐಆರ್ ಕಾರ್ಯವನ್ನು ಸಂಘಟಿತ ರೀತಿಯಲ್ಲಿ ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಕೆಪಿಸಿಸಿ ಹಿರಿಯ ಸದಸ್ಯ ಸಿ.ಎಫ್. ನಾಯ್ಕ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವರ್ಗಗಳ ಅಧ್ಯಕ್ಷ ಬಸವರಾಜ ದೊಡ್ಮನಿ, ಎಸ್‌ಐಆರ್. ಬನವಾಸಿ ಬ್ಲಾಕ್ ಉಸ್ತುವಾರಿ ದ್ಯಾಮಣ್ಣ ದೊಡ್ಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ಉಮಾಕಾಂತ ನಾಯ್ಕ ಸೇರಿದಂತೆ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share