ಸಚಿವ ಡಿ. ಸುಧಾಕರ ನಿಧನಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಸಂತಾಪ

0
30
-Advertisement-
Ad

ಯಲ್ಲಾಪುರ: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ ಅವರ ನಿಧನಕ್ಕೆ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಡಿ. ಸುಧಾಕರ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವದ ಜೊತೆಗೆ ಜನಸೇವೆಯನ್ನು ಧ್ಯೇಯವಾಗಿಸಿಕೊಂಡ ಜನನಾಯಕರು ಎಂದು ತಿಳಿಸಿದ್ದಾರೆ.

ಹಲವು ವರ್ಷಗಳ ಕಾಲ ಜೊತೆಯಾಗಿ ಶಾಸಕರಾಗಿ ಹಾಗೂ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಕ್ಷಣಗಳು ಸದಾ ನೆನಪಿನಲ್ಲಿ ಉಳಿಯಲಿವೆ ಎಂದು ಸ್ಮರಿಸಿದ್ದಾರೆ.

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೆ ಸ್ಪಂದಿಸುತ್ತಿದ್ದ ಅವರ ಅಗಲಿಕೆ ರಾಜ್ಯ ರಾಜಕಾರಣ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬ ಸದಸ್ಯರು, ಅಭಿಮಾನಿಗಳು ಮತ್ತು ಅಪಾರ ಬೆಂಬಲಿಗರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಶಾಸಕ ಹೆಬ್ಬಾರ್ ಪ್ರಾರ್ಥಿಸಿದ್ದಾರೆ.

ಜಾಹೀರಾತು
Ad

LEAVE A REPLY

Please enter your comment!
Please enter your name here