Tuesday, June 16, 2026
HomeLocal Newsಎಸ್‌ಐಆರ್ ಪ್ರಕ್ರಿಯೆ ಯಶಸ್ವಿಗೆ ಕಾರ್ಯಕರ್ತರು ಮುಂದಾಗಿ

ಎಸ್‌ಐಆರ್ ಪ್ರಕ್ರಿಯೆ ಯಶಸ್ವಿಗೆ ಕಾರ್ಯಕರ್ತರು ಮುಂದಾಗಿ

ಮುಂಡಗೋಡ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ ನೀಡಿದರು.

ಪಟ್ಟಣದ ಹೆಬ್ಬಾರ್ ನಗರದ ಕಾರ್ಮಿಕ ಸಮುದಾಯ ಭವನದಲ್ಲಿ ಮಂಗಳವಾರ ಪಕ್ಷದ ಕಾರ್ಯಕರ್ತರಿಗೆ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

 ಎಸ್‌ಐಆರ್ ಪ್ರಕ್ರಿಯೆಯ ಮಹತ್ವ, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಕಾರ್ಯಕರ್ತರ ಪಾತ್ರ ಹಾಗೂ ಅರ್ಹ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅಗತ್ಯ ಮಾಹಿತಿಗಳ ದಾಖಲಾತಿ ಕುರಿತಂತೆ ಮಾರ್ಗದರ್ಶನ ನೀಡಿದರಲ್ಲದೆ, ಮತದಾರರ ಪಟ್ಟಿಯನ್ನು ಸಮರ್ಪಕವಾಗಿ ಪರಿಷ್ಕರಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬಹುದಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್ ಹಾಗೂ ರಾಮಕೃಷ್ಣ ಮೂಲಿಮನಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ, ಜಿಲ್ಲಾ ಕಾರ್ಯದರ್ಶಿ ಸನ್ಮಾ ಶೇರಖಾನೆ, ಹಿಂದುಳಿದ ವರ್ಗ ವಿಭಾಗದ ತಾಲೂಕು ಅಧ್ಯಕ್ಷ ದೇವು ಪಾಟೀಲ್ ಸೇರಿದಂತೆ ಸಿದ್ಧಪ್ಪ ಹಡಪದ, ಮಹಮ್ಮದ್ ಗೌಸ್ ಮಕಾನದಾರ್, ಧರ್ಮರಾಜ ನಾಡಗೇರ್, ಕೆ.ಸಿ. ಗಲಭಿ, ರಫೀಕ ಇನಾಮದಾರ್, ವೈ.ಪಿ. ಭುಜಂಗಿ, ಪರಶುರಾಮ ತಹಶೀಲ್ದಾರ್, ನಾಗಭೂಷಣ ಹಾವಣಗಿ, ಬಸವರಾಜ ಹಾಸ್ಕಟಿ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share