ಯಲ್ಲಾಪುರ: ಕರ್ನಾಟಕ ಜಾನಪದ ಅಕಾಡೆಮಿಯ ಪ್ರತಿಷ್ಠಿತ ಜಾನಪದ ಪ್ರಶಸ್ತಿಗೆ ಭಾಜನರಾಗಿರುವ ಕಾರವಾರ ತಾಲೂಕಿನ ಅಮದಳ್ಳಿಯ ಪುರುಷೋತ್ತಮ ಗೌಡ ಅವರಿಗೆ ಶಾಸಕ ಶಿವರಾಮ ಹೆಬ್ಬಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕದ ಶ್ರೀಮಂತ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪುರುಷೋತ್ತಮ ಗೌಡ ಅವರು ನೀಡಿರುವ ಕೊಡುಗೆ ಶ್ಲಾಘನೀಯ. ನಾಡಿನ ಸಂಸ್ಕೃತಿ, ಸಂಪ್ರದಾಯ, ಕಲೆ ಮತ್ತು ಜನಪದದ ಸೊಗಡನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಜಾನಪದ ಕಲಾವಿದರ ಪಾತ್ರ ಅನನ್ಯವಾಗಿದೆ ಎಂದು ಹೆಬ್ಬಾರ್ ತಿಳಿಸಿದ್ದಾರೆ.
ಕಲಾಸಾಧಕರನ್ನು ಗುರುತಿಸಿ ಗೌರವಿಸುವುದು ನಾಡಿನ ಸಾಂಸ್ಕೃತಿಕ ಪರಂಪರೆಗೆ ಸಲ್ಲಿಸುವ ಗೌರವವಾಗಿದೆ. ಪುರುಷೋತ್ತಮ ಗೌಡ ಅವರ ಕಲಾಸೇವೆ ಮತ್ತು ಸಾಧನೆಗೆ ಸಂದಿರುವ ಈ ಗೌರವವು ಜಾನಪದ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅನೇಕ ಕಲಾವಿದರಿಗೆ ಪ್ರೇರಣೆಯಾಗಲಿ.
ಅವರ ಕಲಾಯಾನ ಇನ್ನಷ್ಟು ಯಶಸ್ಸಿನ ಶಿಖರಗಳನ್ನು ತಲುಪಲಿ ಹಾಗೂ ಅವರ ಸಾಧನೆಗಳು ನಾಡಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಹಾರೈಸಿದ್ದಾರೆ.


