Thursday, October 22, 2026
HomeLocal Newsಹೊಲಿಗೆ ಉದ್ಯೋಗದಿಂದ ಸ್ವಾವಲಂಬಿ ಬದುಕು

ಹೊಲಿಗೆ ಉದ್ಯೋಗದಿಂದ ಸ್ವಾವಲಂಬಿ ಬದುಕು

ಸಿದ್ದಾಪುರ: ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಹೊಲಿಗೆ ಕಲಿಕೆ ಉತ್ತಮ ಮಾರ್ಗವಾಗಿದೆ. ಬಡತನದಿಂದ ಹೊರಬಂದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬ ಉದ್ದೇಶದಿಂದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಹೊಲಿಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದರು.

ತಾಲೂಕಿನ ಹೇರೂರಿನಲ್ಲಿ ನಡೆದ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡುಗೆ ಮತ್ತು ಹೊಲಿಗೆ ಸ್ವಾವಲಂಬಿ ಬದುಕಿಗೆ ಉತ್ತಮ ದಾರಿಗಳಾಗಿವೆ. ಶಿಬಿರದಲ್ಲಿ ನುರಿತ ಶಿಕ್ಷಕರಿಂದ ತರಬೇತಿ ನೀಡಲಾಗುತ್ತಿದ್ದು, ಹೊಲಿಗೆಯನ್ನು ಸರಿಯಾಗಿ ಕಲಿತರೆ ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸಾಧ್ಯವಿದೆ ಎಂದರು.

ಇಂತಹ ತರಬೇತಿ ಶಿಬಿರಗಳಿಂದ ಸಮಾಜದಲ್ಲಿ ಸಾಮರಸ್ಯ, ಆತ್ಮೀಯತೆ ಮತ್ತು ಬಾಂಧವ್ಯ ಬೆಳೆಯುತ್ತದೆ. ಮಹಿಳೆಯರು ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗಣೇಶ ಹೇರೂರು, ಹೊಲಿಗೆ ಕಲಿಯುವುದರಿಂದ ಸಾಕಷ್ಟು ಪ್ರಯೋಜನವಿದೆ. ಒಂದು ತಿಂಗಳ ಕಾಲ ನಡೆಯುವ ಉಚಿತ ತರಬೇತಿ ಶಿಬಿರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೊಲಿಗೆ ಕಲಿಯಬೇಕು. ಮಹಿಳೆಯರು ಉತ್ತಮವಾಗಿ ಹೊಲಿಗೆ ಕಲಿತಾಗ ಟ್ರಸ್ಟ್ ಹಮ್ಮಿಕೊಂಡಿರುವ ಶಿಬಿರದ ಉದ್ದೇಶ ಸಾರ್ಥಕವಾಗುತ್ತದೆ ಎಂದರು.

ಪ್ರಮುಖರಾದ ನರಹರಿ ಮಾತನಾಡಿ, ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು. ಅನಂತಮೂರ್ತಿ ಹೆಗಡೆ ಅವರು ಕಷ್ಟದಿಂದ ಬೆಳೆದವರು, ಬಡತನವನ್ನು ಅನುಭವಿಸಿದವರು. ಆಸ್ಪತ್ರೆ ವಿಚಾರವಾಗಿ ಶಿರಸಿಯಿಂದ ಕಾರವಾರದವರೆಗೆ ಪಾದಯಾತ್ರೆ ನಡೆಸಿದ್ದಾರೆ. ಒಗ್ಗಟ್ಟಾಗಿ ಹೋರಾಟ ಮಾಡಿದರೆ ಜಯ ಸಿಕ್ಕೇ ಸಿಗುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು ಎಂಬ ಉದ್ದೇಶದಿಂದ ಟ್ರಸ್ಟ್ ಉಚಿತ ಹೊಲಿಗೆ ತರಬೇತಿ ಶಿಬಿರ ನಡೆಸುತ್ತಿದ್ದು, ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಅಣ್ಣಪ್ಪ ಗೌಡ, ಕಮಲಾಕರ ನಾಯ್ಕ, ಸೀತಾರಾಮ ಗೌಡ, ಬಾಲಚಂದ್ರ ಹೆಗಡೆ, ವಿಶ್ವನಾಥ ಹೆಗಡೆ, ಪ್ರದೀಪ ಹೆಗಡೆ ಹಾಗೂ ಹೊಲಿಗೆ ತರಬೇತಿ ಶಿಕ್ಷಕಿ ನಾಗರತ್ನ ಗೌಡ ಉಪಸ್ಥಿತರಿದ್ದರು.

ಅನಂತಮೂರ್ತಿ ಹೆಗಡೆ ಅವರಲ್ಲಿ ಸಮಾಜಕ್ಕಾಗಿ ಏನಾದರೂ ಕೊಡಬೇಕು ಎಂಬ ಮನಸ್ಸಿದೆ. ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜ ಸೇವೆಗೆ ಮೀಸಲಿಟ್ಟಿದ್ದಾರೆ. ಲಕ್ಷಾಂತರ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಸಮಾಜ ಸೇವೆ ಮಾಡುವಂತಾಗಲಿ.

– ಎಂ.ಜಿ. ಹೆಗಡೆ ಗೆಜ್ಜೆ.

ಜಿ.ಪಂ. ಮಾಜಿ ಸದಸ್ಯ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share