Friday, July 24, 2026
Join WhatsApp Group
HomeCrimeತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸಿದ್ದಾಪುರ: ಮನೆಕಳ್ಳತನ ಪ್ರಕರಣದಲ್ಲಿ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿದ್ದಾಪುರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಫಾರುಖ್ @ ಫಾರುಖ್ ಉಲ್ಲಾ (24), ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಹಳ್ಳೂರಕೇರಿ ನಿವಾಸಿ ಎಂದು ಗುರುತಿಸಲಾಗಿದೆ.

ಈತನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ IPC ಕಲಂ 457 ಮತ್ತು 380ರಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಲಾಗಿದ್ದರೂ, ಆರೋಪಿತನು ವಿಚಾರಣೆಗೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ.

ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿತನ ವಿರುದ್ಧ ದಸ್ತಗಿರಿ ವಾರಂಟ್ ಹೊರಡಿಸಿತ್ತು. ಬಳಿಕ ಪೊಲೀಸ್ ತಂಡವು ಶಿವಮೊಗ್ಗ, ಹಾವೇರಿ, ಮಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿತು.

ಅಂತಿಮವಾಗಿ ಉಡುಪಿ ಜಿಲ್ಲೆಯ ತ್ರಾಸಿಯಲ್ಲಿ ವೇಷ ಬದಲಾಯಿಸಿಕೊಂಡು ಭಿಕ್ಷಾಟನೆ ಮಾಡುತ್ತಿದ್ದ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕಾರ್ಯಾಚರಣೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿದ್ದಾಪುರ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ನಾಗಪ್ಪ ಬಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಚೇತನಕುಮಾರ ಹಲಗೇರಿ, ಭರತಕುಮಾರ ಕೆ.ಜೆ., ಶಶಿಕಾಂತ ನಾಯ್ಕ ಸೇರಿದಂತೆ ತಂಡ ಯಶಸ್ವಿಯಾಗಿ ನೆರವೇರಿಸಿದೆ.

ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share