ಸಿದ್ದಾಪುರ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಸಿದ್ದಾಪುರ ಪೊಲೀಸರು ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಸಿದ್ದಾಪುರ ಪಟ್ಟಣದ ಎಪಿಎಂಸಿ ಸರ್ಕಲ್ ಸಮೀಪ ಎಗ್‌ರೈಸ್ ಅಂಗಡಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಸಾರ್ವಜನಿಕರಿಗೆ ಮುಕ್ತವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಬೇಡ್ಕಣಿ ನಿವಾಸಿ, ಹೋಟೆಲ್ ಕೆಲಸ ಮಾಡುತ್ತಿರುವ ಮಾಬ್ಲೇಶ್ವರ ಮೂಕಾ ನಾಯ್ಕ (45) ಎಂಬಾತ ಸ್ಥಳದಲ್ಲಿ ಸಿಕ್ಕಿಬಿದ್ದಿದ್ದಾನೆ. ದಾಳಿ ಸಂದರ್ಭದಲ್ಲಿ 90 ಮಿ.ಲೀ. ಮದ್ಯದ ನಾಲ್ಕು ಖಾಲಿ ಟೆಟ್ರಾ ಪ್ಯಾಕೇಟ್‌ಗಳು ಹಾಗೂ ಎರಡು ಪ್ಲಾಸ್ಟಿಕ್ ಗ್ಲಾಸ್‌ಗಳು ಪತ್ತೆಯಾಗಿವೆ.
ಸಿದ್ದಾಪುರ ಠಾಣೆ ಪಿಎಸ್‌ಐ ಶಾಂತಿನಾಥ ಕೆ. ಪಾಸಾನೆ ಅವರ ದೂರಿನ ಆಧಾರದ ಮೇಲೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.