Monday, September 7, 2026
Join WhatsApp Group
HomeCrimeಹುಲಿಮನೆಯ ಇಸ್ಪೀಟ್ ಹುಲಿಗಳ ವಿರುದ್ಧ ಪ್ರಕರಣ

ಹುಲಿಮನೆಯ ಇಸ್ಪೀಟ್ ಹುಲಿಗಳ ವಿರುದ್ಧ ಪ್ರಕರಣ

ಸಿದ್ದಾಪುರ: ತಾಲೂಕಿನ ಹುಲಿಮನೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜುಗಾರಾಟ ಆಡುತ್ತಿದ್ದ ವೇಳೆ ಸಿದ್ದಾಪುರ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಆ.20ರಂದು ಸಂಜೆ 5 ಗಂಟೆ ಸುಮಾರಿಗೆ ಹುಲಿಮನೆ ಗ್ರಾಮದ ರಸ್ತೆಯ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ 5–6 ಮಂದಿ ಸೇರಿಕೊಂಡು ಅಂದರ್-ಬಾಹರ್ ಇಸ್ಪೀಟ್ ಜುಗಾರಾಟ ಆಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿದ್ದಾಪುರ ಪೊಲೀಸ್ ಠಾಣೆಯ ಪಿಎಸ್‌ಐ (ಎಲ್ & ಓ) ಶಾಂತಿನಾಥ ಕೆ. ಪಾಸಾನೆ ಅವರು ಸಿಬ್ಬಂದಿ ಹಾಗೂ ಪಂಚರೊಂದಿಗೆ ದಾಳಿ ನಡೆಸಿದರು.

ದಾಳಿಯ ವೇಳೆ ಹುಲಿಮನೆ ನಿವಾಸಿ ಸತೀಶ ಕನ್ನಾ ಗೌಡ ಎಂಬಾತ ಸಿಕ್ಕಿಬಿದ್ದಿದ್ದು, ಆತನಿಂದ 800 ರೂ ನಗದು ಹಾಗೂ 25 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯ ಸಂದರ್ಭದಲ್ಲಿ ಉಳಿದ ಐವರು ಸ್ಥಳದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಸಿದ್ದಾಪುರ ತಾಲೂಕಿನ ಬಿಳಗಿ ವ್ಯಾಪ್ತಿಯ ಹುಲಿಮನೆ ಗ್ರಾಮದ ಗಿರೀಶ ಅನಂತ ಗೌಡ, ಗೋಪಾಲ ರಾಮಾ ಗೌಡ, ಕೆರಿಯಾ ಕರಿಯಾ ಗೌಡ, ಮಂಜುನಾಥ ಗೌಡ ಹಾಗೂ ಗೋಪಾಲ ದೊಡ್ಡಕಟ್ಟೆ ಗೌಡ ಇವರುಗಳನ್ನೂ ಆರೋಪಿಗಳೆಂದು ದಾಖಲಿಸಲಾಗಿದೆ.

ಈ ಕುರಿತು ಪಿಎಸ್‌ಐ ಶಾಂತಿನಾಥ ಕೆ. ಪಾಸಾನೆ ಅವರು ಸರ್ಕಾರದ ಪರವಾಗಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share